(pm-kisan yojana) ಕೇಂದ್ರ ಸರ್ಕಾರದ ಹಲವು ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ಹಣ ಜಮಾ ಯಾವಾಗ, ಯಾರು ಅರ್ಹರು ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಈ ಯೋಜನೆಯಲ್ಲಿ ಮಹಿಳೆಯರಿಗೆ ಸಿಗುತ್ತೆ 11,000; ಕೂಡಲೇ ಅರ್ಜಿ ಸಲ್ಲಿಸಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಅರ್ಹ ರೈತರ ಖಾತೆಗೆ 2000 ರೂ ಗಳನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ. ಇದೀಗ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ಈ ತಿಂಗಳ ಕೊನೆ ಅಥವಾ ಮೇ ತಿಂಗಳಿನಲ್ಲಿ ಜಮಾ ಆಗಲಿದೆ.
ಇಂತಹವರಿಗೆ ಜಮಾ ಆಗೋದಿಲ್ಲ 17 ನೇ ಕಂತಿನ ಹಣ:
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಜಮಾ ಆಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದೇ ಇರುವವರಿಗೆ ಈ ಯೋಜನೆಯ ಹಣ ಜಮಾ ಆಗೋದಿಲ್ಲ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಯಾರು ಅರ್ಹರು, ಯಾರು ಅನರ್ಹರು ಎಂಬ ಪಟ್ಟಿ ಬಿಡುಗಡೆ ಮಾಡಿದ್ದು, ಸುಲಭವಾಗಿ ನಿಮ್ಮ ಹೆಸರಿದ್ಯಾ ಎಂದು ಚೆಕ್ ಮಾಡಿಕೊಳ್ಳಬಹುದು.
ಅರ್ಹ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿ:
* ಮೊದಲಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://pmkisan.gov.in/)
* ನಂತರ ಫಲಾನುಭವಿಗಳ ಆಯ್ಕೆ ಮೇಲೆ ಕ್ಲಿಕ್ ಮಾಡಿ.
* ನಂತರ ಕಾಣುವ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ಕೆ ಮಾಡಿ.
* ನಂತರ ಪೇಜ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ 17 ನೇ ಕಂತಿನ ಹಣ ಜಮಾ ಆಗಲಿದೆ.
ಅನರ್ಹರ ಪಟ್ಟಿಯನ್ನು ಹೀಗೆ ಚೆಕ್ ಮಾಡಿ:
* ಮೊದಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://pmkisan.gov.in/VillageDashboard_Portal.aspx)
* ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ಕೆ ಮಾಡಿ,
* ನಂತರ ಸಬ್ಮಿಟ್ ಎನ್ನವ ಆಯ್ಕೆಯನ್ನು ಕ್ಲಿಕ್ ಮಾಡಿ.
* ನಂತರ Aadhaar authentication status ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ
* ನಂತರ ಪೇಜ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನರ್ಹರ ಪಟ್ಟಿ ಸಿಗಲಿದೆ.
ಇದನ್ನೂ ಓದಿ: ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್







Leave a Reply