(Pm kisan yojana) ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. ಆದರೆ, ಚುನಾವಣೆ ಫಲಿತಾಂಶ ಪ್ರಕಟ ಆದ ನಂತರ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆಯಲ್ಲಿ ಏರಿಕೆ; ರೈತರಿಗೆ ಸಿಎಂ ಯಿಂದ ಮಹತ್ವದ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ವಾರ್ಷಿಕ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಹಾಕಲಾಗುತ್ತದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ; ನೇಮಕಾತಿ ಮೀಸಲಾತಿ ಬಗ್ಗೆ ಗೆಜೆಟ್ ನಿಂದ ಅಧಿಸೂಚನೆ; ಮೀಸಲಾತಿ ಅಳವಡಿಕೆ ಕುರಿತು ಈ ಸೂಚನೆ ಕಡ್ಡಾಯ
ಪ್ರತಿ ಕಂತಿನಲ್ಲಿ ಡಿಬಿಟಿ ಮೂಲಕ ರೈತರ ಖಾತೆಗೆ 2 ಸಾವಿರ ರೂಪಾಯಿನಂತೆ ಇದುವರೆಗೆ ಒಟ್ಟು 16 ಕಂತುಗಳನ್ನು ರೈತರ ಖಾತೆಗೆ ವರ್ಗಾಯಿಸಲಾಗಿದೆ. 16 ನೇ ಕಂತು ಬಿಡುಗಡೆಯಾಗಿ ಮೂರು ತಿಂಗಳು ಕಳೆದಿವೆ. ಇದೀಗ 17 ನೇ ಕಂತಿಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ನಂತರ ಕೇಂದ್ರ ಸರ್ಕಾರವು ಜೂನ್ ಅಥವಾ ಜುಲೈನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತು ಬಿಡುಗಡೆ ಮಾಡಬಹುದು. ಆದರೆ, ಕಂತಿನ ಹಣ ಯಾವಾಗ ವರ್ಗಾವಣೆಯಾಗುತ್ತದೆ ಎಂಬ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅದೇ ಸಮಯದಲ್ಲಿ ಯೋಜನೆಯಡಿಯಲ್ಲಿ ಇನ್ನೂ ಇ-ಕೆವೈಸಿ ಮಾಡದ ರೈತರು ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಬಡ್ಡಿರಹಿತ ಸಾಲ!
ಹೌದು, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಬೇಕಾದರೆ ನೀವು ಮೊದಲು ಇ-ಕೆವೈಸಿ ಮಾಡಿಸಬೇಕು ಇದು ಕಡ್ಡಾಯವಾಗಿದೆ. ಒಂದು ವೇಳೆ ಮಾಡಿಸದೇ ಇದ್ದಲ್ಲಿ ಅಂತಹ ರೈತರಿಗೆ ಹಣ ಜಮಾ ಆಗುವುದಿಲ್ಲ.
ಆದ್ದರಿಂದ ನೀವು 17 ನೇ ಕಂತಿನ ಪ್ರಯೋಜನವನ್ನು ಪಡೆಯಲು ಬಯಸಿದರೆ, ನಿಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಬೇಕು. ಇದಲ್ಲದೇ ಯೋಜನೆಯಡಿ ಭೂದಾಖಲೆಗಳನ್ನು ಪರಿಶೀಲಿಸದೇ ಇರುವ ರೈತರು ಕೂಡ ಈ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಮೇಜರ್ ಸಪೋರ್ಟ್ ನಿಂದ ಬ್ರೇಕ್ ಡೌನ್ ಆದ ನಿಫ್ಟಿ!; 6 ತಿಂಗಳಿಗೆ 86% ಲಾಭ ಕೊಟ್ಟ ಈ ಸರ್ಕಾರಿ ಷೇರು ಯಾವುದು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- TCS ನಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






