PM Matru Vandana Yojana: ಈ ಯೋಜನೆಯಲ್ಲಿ ಸಿಗುತ್ತೆ 11,000

0
2567

(PM Matru Vandana Yojana) ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ 11 ಸಾವಿರ ಆರ್ಥಿಕ ನೆರವನ್ನು ನೀಡುತ್ತದೆ. ಈ ಯೋಜನೆಯನ್ನು ಉಪಯೋಗಿಸಿಕೊಂಡು ತಾಯಿ ಮತ್ತು ಮಗುವಿನ ಪೋಷಣೆಗೆ ಸಹಾಯವಾಗಲಿದೆ. ಹಾಗಾದರೆ ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!


ಯಾವ ಯೋಜನೆಯಲ್ಲಿ ಈ ಲಾಭ ಪಡೆಯಬಹುದು:
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು 11,000 ಆರ್ಥಿಕ ನೆರವು ನೀಡಲಾಗುತ್ತದೆ.

ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು. ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.


ಇದನ್ನೂ ಓದಿ: ಲೋಕಸಭಾ ಚುನಾವಣೆ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ?; ಹಾಗಿದ್ರೆ ಬೂತ್ ಸ್ಲಿಪ್ ಅನ್ನು ಈ ರೀತಿ ಸಿಂಪಲ್ ಸ್ಟೆಪ್ಸ್ ನಲ್ಲಿ ಪಡೆಯಿರಿ


ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ 5000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ 6,000 ಗಳನ್ನು ನೀಡಲಾಗುವುದು. ಇನ್ನು 5,000 ಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ.


ಇದನ್ನೂ ಓದಿ: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ;  ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಹಾಗಾದರೆ ಯಾರಿಗೆ ಸಿಗುತ್ತೆ ಆರ್ಥಿಕ ನೆರವು?:
* ಭಾರತೀಯ ನಾಗರಿಕರಾಗಿರಬೇಕು
* 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ
* ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು
* ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.


ಇದನ್ನೂ ಓದಿ: ಏರ್‌ ಇಂಡಿಯಾ ಏರ್ ಟ್ರಾನ್ಸ್‌ ಪೋರ್ಟ್‌ ಸರ್ವೀಸ್‌ ನಲ್ಲಿ ಉದ್ಯೋಗ; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸುವುದು ಹೇಗೆ?:
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.

ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ


ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಜನನ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಪಾನ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ಪಾಸ್ ಪೋರ್ಟ್ ಅಳತೆಯ ಫೋಟೋ


ಇದನ್ನೂ ಓದಿ: ಈ ಜಿಲ್ಲಾ ಕೋರ್ಟ್ ನಲ್ಲಿ ಭರ್ಜರಿ ಜಾಬ್ ಆಫರ್; puc ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ; ಈಗಲೇ ಅರ್ಜಿ ಸಲ್ಲಿಸಿ


PM Matru Vandana Yojana: ಈ ಯೋಜನೆಯಲ್ಲಿ ಸಿಗುತ್ತೆ 11,000
PM Matru Vandana Yojana: ಈ ಯೋಜನೆಯಲ್ಲಿ ಸಿಗುತ್ತೆ 11,000