(PM SGMB) ಪ್ರಧಾನಮಂತ್ರಿ ಸೂರ್ಯ ಘರ್ ಮುಕ್ತ ವಿದ್ಯುತ್ ಯೋಜನೆಯಡಿಯಲ್ಲಿನ ಸಬ್ಸಿಡಿ ಮಾಹಿತಿಯನ್ನು ಬೆಸ್ಕಾಂ (BESCOM) ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. 5 ವರ್ಷ ಪಾವತಿಯನ್ನು ಮಾಡಿ, 20 ವರ್ಷ ಯಾವುದೇ ಹಣ ಪಾವತಿಸದೇ, ವಿದ್ಯುತ್ ಅನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
2024ರ ಫೆಬ್ರುವರಿಯಲ್ಲಿ ಆರಂಭವಾದ ಪಿಎಂ ಸೂರ್ಯಘರ್ ಮುಫ್ತ್ ಬಿಜಿಲಿ ಉಚಿತ ವಿದ್ಯುತ್ ಯೋಜನೆ ಅಡಿಯಲ್ಲಿ ಜನರ ಮನೆಗಳ ಮೇಲ್ಛಾವಣಿಯಲ್ಲಿ ಸೋಲಾರ್ ಘಟಕಗಳನ್ನು ಸ್ಥಾಪಿಸುವ ಮೂಲಕ ವಿದ್ಯುತ್ ಸ್ವಾಲಂಬನೆ ಸಾಧಿಸುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಸಬ್ಸಿಡಿ ಮೊತ್ತದ ಸೌಲಭ್ಯವನ್ನು ಒದಗಿಸಲಾಗುತ್ತಿದೆ.
ರೂಫ್ ಟಾಪ್ ಸೋಲಾರ್ ಪ್ಲ್ಯಾಂಟ್ ಹಾಕಿಸಿಕೊಳ್ಳಲು ತಗಲುವ ಖರ್ಚು ಮತ್ತು ಅದರಿಂದಾಗುವ ಉಳಿತಾಯದ ಬಗ್ಗೆಯೂ ಬೆಸ್ಕಾಂ ವಿವರಣೆಯನ್ನು ನೀಡಿದೆ. ಇದಕ್ಕೆ ವಾರ್ಷಿಕ 7% ನಲ್ಲಿ ಬ್ಯಾಂಕ್ ಲೋನ್ ಕೂಡಾ ಲಭ್ಯವಿದೆ. ಹತ್ತು ವರ್ಷದವರೆಗೆ ಇಎಂಐ ಕಟ್ಟುವ ಅವಕಾಶವೂ ಇದೆ ಎಂದು ಬೆಸ್ಕಾಂ ತನ್ನ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಸಬ್ಸಿಡಿ ಮೊತ್ತದ ವಿವರ ಹೀಗಿದೆ:
* 1ಕಿಲೋವ್ಯಾಟ್: 30 ಸಾವಿರ ರೂಪಾಯಿ
* 2ಕಿಲೋವ್ಯಾಟ್: 60 ಸಾವಿರ ರೂಪಾಯಿ
* 3 ಕಿಲೋವ್ಯಾಟ್: 78 ಸಾವಿರ ರೂಪಾಯಿ
(PM SGMB) ಇದರ ಪ್ರಯೋಜನೆಗಳೇನು?
* ವಿದ್ಯುತ್ ಬಿಲ್ನಲ್ಲಿ ಉಳಿತಾಯ
* ಹೆಚ್ಚುವರಿ ವಿದ್ಯುತ್ ಅನ್ನು ಬೆಸ್ಕಾಂಗೆ ಮಾರಾಟ ಮಾಡುವ ಮೂಲಕ ಆದಾಯ ಗಳಿಸಬಹುದು.
* ಪರಿಸರ ಸ್ನೇಹಿ ವಿದ್ಯುತ್ ವ್ಯವಸ್ಥೆ
* ಈ ವ್ಯವಸ್ಥೆ ಪಡೆಯಲು ಬೇಕಿರುವ ದಾಖಲೆಗಳು ವಿದ್ಯುತ್ ಬಿಲ್ ಮತ್ತು ಆಧಾರ್ ಕಾರ್ಡ್ ಮಾತ್ರ.
ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಒಂದು ಕಿಲೋವ್ಯಾಟ್ ಸೋಲಾರ್ ಫಲಕ ಹಾಕಲು 10 X 10 ಜಾಗ ಸಾಕು ಮತ್ತು ಪ್ಲ್ಯಾಂಟಿನ ಮೊತ್ತ ಐದು ವರ್ಷದ ನಿರ್ವಹಣಾ ವೆಚ್ಚವೂ ಒಳಗೊಂಡಂತೆ ಸೇರಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಹೇಳಿದೆ. ಲೇಟೆಸ್ಟ್ ವಿದ್ಯುತ್ ಬಿಲ್ ಮತ್ತು ಆಧಾರ್ ಕಾರ್ಡಿನ ಕಾಪಿಯೊಂದಿಗೆ ಇದಕ್ಕೆ ಅರ್ಜಿ ಸಲ್ಲಿಸಬಹುದು.
ಮನೆಬಳಕೆಯ ನಂತರ ಉಳಿಯುವ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ, ತಿಂಗಳು ತಿಂಗಳು ಹಣವನ್ನೂ ಸಹ ಸಂಪಾದಿಸಬಹುದು ಎಂದು ಬೆಸ್ಕಾಂ ಹೇಳಿದೆ. 1, 2 ಮತ್ತು 3 ಕಿಲೋವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲ್ಯಾಂಟ್ ಅಳವಡಿಸಬಹುದಾಗಿದೆ.
ಇದನ್ನೂ ಓದಿ: ಜೊಮಾಟೊ ಬ್ರ್ಯಾಂಡ್ ನೇಮ್ ಚೇಂಜ್; ಈ ಬದಲಾವಣೆಗೆ ಕಾರಣವೇನು ಗೊತ್ತಾ?
ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಘರ್ ಮುಕ್ತ್ ಬಿಜಿಲಿ ಯೋಜನೆ ಅಧಿಕೃತ ವೆಬ್‌ಸೈಟ್ (https://www.pmsuryaghar.gov.in/) ಮೂಲಕ ಸುಲಭವಾಗಿ ಸಲ್ಲಿಕೆ ಮಾಡಬಹುದು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಮೊದಲ ಐದು ವರ್ಷದಲ್ಲೇ ಹಾಕಿದ ಬಂಡವಾಳ ವಾಪಸ್ ಬರುತ್ತದೆ. ಬಳಕೆಯ ನಂತರ ಉಳಿದ ವಿದ್ಯುತ್ ಅನ್ನು ಆಯಾಯ ವಿದ್ಯುತ್ ಪೂರೈಕೆ ಕಂಪೆನಿಗಳಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್
ಸೂರ್ಯಘರ್ ಯೋಜನೆಗೆ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ 080-22340816 ಕ್ಕೆ ಕರೆ ಮಾಡಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





