pm vishwakarma: ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂ

(pm vishwakarma) ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಅದರಲ್ಲಿ ಉದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಿಕೊಳ್ಳಲು ಟೂಲ್ ಕಿಟ್ ಇ- ವೋಚರ್ ಸೌಲಭ್ಯದ ಜೊತೆಗೆ 15,000 ಗಳನ್ನು ಕೂಡ ನೀಡಲಾಗುತ್ತದೆ. ಇದು ಯಾರಿಗೆ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; sslc, puc ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ


ಕೇಂದ್ರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯ ಕುಶಲಕರ್ಮಿಗಳಿಗೆ ಟೂಲ್ ಕಿಟ್ ಜೊತೆಗೆ 15,000 ಗಳನ್ನು ನೀಡುತ್ತದೆ. ವಿಶ್ವಕರ್ಮ ಸಮುದಾಯ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಬಲಗೊಳ್ಳಬೇಕು ಹಾಗೂ ಅವರು ಸ್ವಂತ ದುಡಿಮೆಯಿಂದ ಜೀವನ ನಡೆಸಿಕೊಳ್ಳುವಂತೆ ಆಗಬೇಕು ಎನ್ನುವ ಕಾರಣಕ್ಕೆ ಈ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಸುಮಾರು 18 ವಿವಿಧ ವೃತ್ತಿ ಮಾಡುತ್ತಿರುವ ಕುಶಲಕರ್ಮಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ.

ಈ ಯೋಜನೆಯ ಅಡಿಯಲ್ಲಿ 15,000ಗಳನ್ನು ಟೂಲ್ ಕಿಟ್ ಪಡೆದುಕೊಳ್ಳಲು ಸರ್ಕಾರ ನೇರವಾಗಿ ಕುಶಲಕರ್ಮಿಗಳ ಖಾತೆಗೆ ಜಮಾ ಮಾಡುತ್ತದೆ ಜೊತೆಗೆ ಅವರ ಉದ್ಯೋಗಕ್ಕೆ ಸಂಬಂಧಪಟ್ಟಂತೆ ಟ್ರೈನಿಂಗ್ ಕೂಡ ನೀಡಲಾಗುವುದು, ಟ್ರೈನಿಂಗ್ ಸಮಯದಲ್ಲಿ 500 ರೂಪಾಯಿಗಳ ಹಣವನ್ನು ನೀಡಲಾಗುವುದು ಜೊತೆಗೆ ಅತಿ ಕಡಿಮೆ ಬಡ್ಡಿ ದರಕ್ಕೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಹಣ ಬಿಡುಗಡೆ ಯಾವಾಗ ಗೊತ್ತಾ?;  ರೈತರೇ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಈಗಲೇ ಚೆಕ್ ಮಾಡಿ


ವಿಶ್ವಕರ್ಮ ಯೋಜನೆ ಅಡಿಯಲ್ಲಿ ಟೂಲ್ ಕಿಟ್ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು ಯಾವುದು?;
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ಆಧಾರ್ ಕಾರ್ಡ್
* ಮೊಬೈಲ್ ಸಂಖ್ಯೆ
* ಬ್ಯಾಂಕ್ ಖಾತೆಯ ವಿವರ
* ಗುರುತಿನ ಪುರಾವೆ
* ಅಡ್ರೆಸ್ ಪ್ರೊಫ್
ಈ ಮೊದಲಾದ ದಾಖಲೆಗಳನ್ನು ಕೊಡಬೇಕು.


ಇದನ್ನೂ ಓದಿ: ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!; ನಿಮ್ಮ ಕಾರ್ಡ್ ಇದಿಯಾ ನೋಡಿಕೊಳ್ಳಿ


ಅರ್ಜಿ ಸಲ್ಲಿಸುವುದು ಹೇಗೆ?:
* ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. (https://pmvishwakarma.gov.in)
* ನಂತರ ಲಾಗಿನ್ ಆಗಬೇಕು
* ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ ಕ್ಯಾಪ್ಟ ನಂಬರ್ ಹಾಕಿದರೆ ಒಟಿಪಿಯನ್ನು ನಮೂದಿಸಿ.
* ಬಳಿಕ ಅಗತ್ಯ ಇರುವ ಮಾಹಿತಿಗಳನ್ನು ನೀಡಿ ಟೂಲ್ ಕಿಟ್ ಪಡೆದುಕೊಳ್ಳುವುದಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

pm vishwakarma: ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂ
pm vishwakarma: ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ