(PMAY) ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆಯಡಿ ಮನೆ ನಿರ್ಮಾಣದ ಕುರಿತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮಹತ್ವದ ಸೂಚನೆಯನ್ನು ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣಗೊಳಿಸಿ ಎಂದು ಹೇಳಿದರು. ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜೊತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ. ಸಬ್ಸಿಡಿ ಮೊತ್ತ ಸಕಾಲಕ್ಕೆ ತಲುಪುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?
ಬೆಂಗಳೂರು ನಗರದಲ್ಲಿ ರೂಪಿಸಿರುವ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸಿ ಶೀಘ್ರ ಹಂಚಿಕೆಗೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು. ಪ್ರಧಾನ ಮಂತ್ರಿ ನಗರ ಮತ್ತು ಗ್ರಾಮೀಣ ಅವಾಸ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಪಾಲುದಾರಿಕೆ ಇರುವುದರಿಂದ ಹೆಚ್ಚಿನ ಅನುದಾನ ಪಡೆಯಲು ಸದ್ಯದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್; ಲ್ಯಾಂಡ್ ಬೀಟ್ ಪ್ರೋಗ್ರಾಂನಿಂದ ಸರ್ಕಾರಿ ಜಮೀನು ರಕ್ಷಣೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






