Pmkisan: ಪಿಎಂ ಕಿಸಾನ್’ನ 22ನೇ ಕಂತಿನ ಹಣ ಬಿಡುಗಡೆ

(Pmkisan:) ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಿನ್ನೆ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ದೇಶದ 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಗಳಂತೆ ಒಟ್ಟು 18,640 ಕೋಟಿ ರೂಗಳನ್ನು ನೇರವಾಗಿ ಜಮೆ ಮಾಡಲಾಗಿದೆ.


ನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್


ಆದರೆ ಕಳೆದ ಬಾರಿ ಹೋಲಿಸಿದರೆ ಈ ಬಾರಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. 21ನೇ ಕಂತಿನ ಹಣವನ್ನು ಸುಮಾರು 9,35,79,869 ರೈತರು ಪಡೆದಿದ್ದರೆ, ಈ ಬಾರಿ ಸುಮಾರು 3.8 ಲಕ್ಷದಷ್ಟು ರೈತರು ಕಡಿಮೆ ಆಗಿದ್ದಾರೆ. ಇಕೆವೈಸಿ ಪೂರ್ಣಗೊಳಿಸದೇ ಇರುವುದು ಸೇರಿದಂತೆ ವಿವಿಧ ಕಾರಣಗಳಿಂದ ಲಕ್ಷಾಂತರ ರೈತರಿಗೆ ಈ ಬಾರಿ ಯೋಜನೆಯ ಲಾಭ ದೊರಕಿಲ್ಲ ಎನ್ನಲಾಗಿದೆ.

ಏನಿದು ಪಿಎಂ ಕಿಸಾನ್ ಯೋಜನೆ?
ಪಿಎಂ ಕಿಸಾನ್ ಯೋಜನೆ ಕೇಂದ್ರ ಸರ್ಕಾರವು ರೈತರ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಲೆಂದು ಜಾರಿಗೊಳಿಸಿದ ಮಹತ್ವದ ಯೋಜನೆಯಾಗಿದೆ. ಇದರಡಿ ಅರ್ಹ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂ ಸಹಾಯಧನ ನೀಡಲಾಗುತ್ತದೆ. ಈ ಹಣವನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ 2,000 ರೂಗಳಂತೆ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.


ನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?


ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ನಿಮ್ಮ ಖಾತೆಗೆ ಹಣ ಬಂದಿಲ್ಲದಿದ್ದರೆ ಕೆಲವು ಕಾರಣಗಳಿರಬಹುದು. ಉದಾಹರಣೆಗೆ ಇಕೆವೈಸಿ ಪೂರ್ಣಗೊಳಿಸದೇ ಇರುವುದು, ದಾಖಲೆಗಳಲ್ಲಿ ದೋಷಗಳು ಅಥವಾ ಯೋಜನೆಗೆ ಅರ್ಹತೆ ಇಲ್ಲದಿರುವುದು ಮುಂತಾದವು.

ಇಂತಹ ಸಂದರ್ಭಗಳಲ್ಲಿ ರೈತರು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ ತಮ್ಮ ಗ್ರಾಮದ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಬಹುದು. ವೆಬ್‌ಸೈಟ್‌ನಲ್ಲಿರುವ Farmers Corner ವಿಭಾಗದಲ್ಲಿ Beneficiary List ಆಯ್ಕೆ ಮಾಡಿ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮವನ್ನು ಆಯ್ದುಕೊಂಡರೆ ತಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಇದೇ ವೆಬ್‌ಸೈಟ್‌ನಲ್ಲಿ ಇಕೆವೈಸಿ ಅಪ್‌ಡೇಟ್ ಮಾಡುವ ಸೌಲಭ್ಯವೂ ಲಭ್ಯವಿದೆ.

Pmkisan: ಪಿಎಂ ಕಿಸಾನ್'ನ 22ನೇ ಕಂತಿನ ಹಣ ಬಿಡುಗಡೆ
Pmkisan: ಪಿಎಂ ಕಿಸಾನ್’ನ 22ನೇ ಕಂತಿನ ಹಣ ಬಿಡುಗಡೆ

ನ್ನೂ ಓದಿ: ಹೊಸ ಕಾರು/ಬೈಕ್ ಕೀಲಿಯ ಜೊತೆ ಸಿಗುವ ಮೆಟಲ್ ಟ್ಯಾಗ್ ರಹಸ್ಯವೇನು …; ವಾಹನ ಸವಾರರು ಓದಲೇಬೇಕಾದ ಸ್ಟೋರಿ..


ಇತ್ತೀಚಿನ ಜನಪ್ರಿಯ ಸುದ್ದಿಗಳು (Pmkisan:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ