Podi repair;-ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ

(Podi repair;-) ರಾಜ್ಯದ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುಡ್‌ ನ್ಯೂಸ್‌ ಒಂದನ್ನು ನೀಡಿದ್ದಾರೆ.


ಇದನ್ನೂ ಓದಿ: ಪದವಿ ವಿದ್ಯಾರ್ಥಿಗಳಿಗೆ £7,500 ಸ್ಕಾಲರ್‌ ಶಿಪ್‌ ಲಭ್ಯ


ಹೌದು, ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದ್ದು, ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ. ಸರಳೀಕೃತ ರೂಪದಲ್ಲಿ ಪೋಡೊ ದುರಸ್ತಿ ಮಾಡಿಕೊಡಲಿದ್ದು, ಇದರಿಂದ ರೈತರು ಕಚೇರಿಗಳಿಗೆ ವಿನಾಕಾರಣ ಅಲೆಯುವುದು ತಪ್ಪುತ್ತದೆ. ನಾವೇ ಮನೆಗಳಿಗೆ ಹೋಗಿ 1-5 ದಾಖಲೆಗಳನ್ನು ಸಿದ್ಧಪಡಿಸುತ್ತೇವೆ. ಇವುಗಳ ಪೈಕಿ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆಯಿಂದ ಭೂಮಾಪನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.


ಇದನ್ನೂ ಓದಿ: ಅಕ್ಷಯ ತೃತೀಯದಂದೇ ಗಜಕೇಸರಿ ರಾಜಯೋಗ…; ಈ 5 ರಾಶಿಯವರಿಗೆ ಕುಬೇರನ ಕೃಪೆ!


ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿ:
ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಮತ್ತು ಬಿ ದರ್ಜೆಯ ಕಡತಗಳನ್ನು ಭೂ ಸುರಕ್ಷಾ ಯೋಜನೆ ಅಡಿ ಗಣಕೀಕರಣ ಮಾಡಿ ಇಂಡೆಕ್ಸ್ ಕ್ಯಾಟಲಾಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತಿದೆ. ಇದುವರೆಗೆ 18.28 ಕೋಟಿ ಪುಟಗಳಷ್ಟು ಸ್ಕ್ಯಾನ್ ಮಾಡಲಾಗಿದ್ದು, ಇನ್ನು ಮುಂದೆ ಆನ್ಲೈನ್ ನಲ್ಲಿ ಅರ್ಜಿ ಹಾಕಿ ಪ್ರಮಾಣೀಕೃತ ದಾಖಲೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬಿಒಬಿ ಬ್ಯುಸಿನೆಸ್‌ ಡೆವಲಪ್ಮೆಂಟ್ ಮ್ಯಾನೇಜರ್‌ ನೇಮಕ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ


ಫಲಾನುಭವಿಗಳಿಗೆ ಡಿಜಿಟಲ್ ಹಕ್ಕು ಪತ್ರ ನೀಡುವ ಮೂಲಕ ಮುಂದಿನ ದಿನಗಳಲ್ಲಿ ನಡೆಯಬಹುದಾದ ಅಕ್ರಮಗಳಿಗೂ ತಡೆಯೊಡ್ಡಿ ಅವರಿಗೆ ಶಾಶ್ವತ ನೆಮ್ಮದಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Podi repair;-ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ
Podi repair;-ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Podi repair;-) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?