(police job:) ರಾಜ್ಯದಲ್ಲಿ ಪೊಲೀಸ್ ಪೇದೆ ಮತ್ತು ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಒಂದು ಬಾರಿ ವಯೋಮಿತಿ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್ಐ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ವಯೋಮಿತಿ ಸಡಿಲಿಕೆಗೆ ಸಂಬಂಧಿಸಿದಂತೆ ಒತ್ತಾಯಿಸಲಾಗಿತ್ತು. ಬೇಡಿಕೆಗೆ ಅಧಿಕೃತವಾಗಿ ಅನುಮೋದನೆ ನೀಡಲಾಗಿದ್ದು, ವಯೋಮಿತಿ ಸಡಿಲಿಕೆಗೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್
ಪಿಎಸ್ಐ ಹುದ್ದೆಗಳಿಗೆ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ರಿಂದ 32 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 28 ರಿಂದ 30 ವರ್ಷಕ್ಕೆ ಹೆಚ್ಚಳ ಮಾಡಲಾಗುವುದು. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27ರಿಂದ 30 ವರ್ಷಕ್ಕೆ, ಇತರೆ ವರ್ಗದವರಿಗೆ 25 ರಿಂದ 27 ವರ್ಷಕ್ಕೆ ವಯೋಮಿತಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಯುವುದು ಕಡ್ಡಾಯ!
ಇತ್ತೀಚಿನ ಜನಪ್ರಿಯ ಸುದ್ದಿಗಳು (police job:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





