ಮೈಸೂರು: ರಾಜ್ಯದ ಬಡವರಿಗೆ 3.30 ಲಕ್ಷ ಮನೆಗಳನ್ನು ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ ವಾಸಿಸುತ್ತಿರುವ ಬಡ ಜನರಿಗಾಗಿ 3.30 ಲಕ್ಷ ಮನೆಗಳನ್ನು ನಿರ್ಮಿಸಿ ಅವುಗಳ ಹಕ್ಕುಪತ್ರಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಮನೆಗಳನ್ನು ನಿರ್ಮಿಸಿ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮನೆಗಳ ನೋಂದಣಿಯನ್ನು ಮಾಡಲು 1000 ರೂ ಶುಲ್ಕವನ್ನು ನಿಗದಿ ಮಾಡಲಾಗುವುದು, ಇತರೆ ಸಮುದಾಯದವರ ಮನೆಗಳ ನೋಂದಣಿಗೆ 2000 ರೂ. ಶುಲ್ಕವನ್ನು ನಿಗದಿ ಮಾಡಲಾಗುವುದು ಎಂದು ಸಚಿವರು ಮಾಹಿತಿಯನ್ನು ನೀಡಿದ್ದಾರೆ.