ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಹಾಸನ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳಿಂದ ತಂದ ಆಲೂಗಡ್ಡೆಯನ್ನು ನೂರಾರು ರೈತರು 250 ಎಕರೆಗೂ ಅಧಿಕ ಜಮೀನಿನಲ್ಲಿ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ಮೂರೇ ದಿನಕ್ಕೆ ಹಾಸನದ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳ ಅಸಲಿ ಮುಖವಾಡ ಬಯಲಾಗಿ, ರೈತರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ; ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಇದನ್ನೂ ಓದಿ; ಸಿಡಿಲು ಬಡಿದು ಮಹಿಳೆ ಸಾವು
ಕಳೆದ ಒಂದು ವಾರದಿಂದ ಕಾಫಿನಾಡು ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಗಾಗಿ ಕಾದಿದ್ದ ರೈತರು ಉತ್ತಮ ಬಿತ್ತನೆ ಬೀಜ ತಂದು ಬಿತ್ತನೆ ಕಾರ್ಯ ಆರಂಭ ಮಾಡಿದ್ದಾರೆ. ಅಂಬಳೆ, ಸಿರಗಾಪುರ, ಮಳಲೂರು ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ನೂರಾರು ರೈತರು ಹಾಸನ ನಗರದ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳಿಂದ 4 ಲಾರಿ ಲೋಡ್ ಬಿತ್ತನೆಗಾಗಿ ಆಲೂಗಡ್ಡೆ ತರಿಸಿ, ಉತ್ತಮ ಲಾಭದ ಆಸೆ ತೋರಿಸಿ ರೈತರಿಗೆ ಆಲೂಗಡ್ಡೆ ಬೀಜವನ್ನು ನೀಡಿದ್ದರು.
ಹಾಸನದ ಆಲೂಗಡ್ಡೆ ವ್ಯಾಪಾರಿಗಳ ಮಾತು ನಂಬಿದ ನೂರಾರು ರೈತರು, ಎಕರೆಗೆ 60 ಸಾವಿರಕ್ಕೂ ಅಧಿಕ ಹಣವನ್ನ ಖರ್ಚು ಮಾಡಿ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಮಾಡಿದ್ದರು. ಇದೀಗ ಬಿತ್ತನೆ ಮಾಡಿ ಮೂರೇ ದಿನಕ್ಕೆ ಆಲೂಗಡ್ಡೆ ಬೀಜ ಕೊಳೆಯಲಾರಂಭಿಸಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ
- ಸಾಲಬಾಧೆಯಿಂದ ಬೇಸತ್ತ ಯುವಕರೈಲಿಗೆ ತಲೆಕೊಟ್ಟು ಆತ್ಮಹತ್ಯೆ
- ಸರಕು ಸಾಗಣೆ ವಾಹನ ಮತ್ತು ಸ್ಕೂಟರ್ ಮಧ್ಯೆ ಅಪಘಾತ; ಸ್ಕೂಟರ್ ಸವಾರ ಸಾವು
ಹಾಸನ ನಗರದ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳು ನಕಲಿ ಬಿತ್ತನೆ ಬೀಜವನ್ನ ನೀಡಿ ವಂಚನೆ ಮಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಆಲೂಗಡ್ಡೆ ಬೆಳೆ ಬೆಳೆದು, ಒಳ್ಳೆ ಲಾಭದ ನಿರೀಕ್ಷೆಯಲ್ಲಿದ್ದ ರೈತನಿಗೆ ಆಲೂಗಡ್ಡೆ ಬೀಜ ಮಾರಾಟಗಾರರು ಮಾಡಿದ ಮೋಸದಿಂದ ಸಂಕಷ್ಟಕ್ಕೆ ಸಿಲುಕಿದ್ದು. ನಕಲಿ ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ; ಬೈಕ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ಮಹಿಳೆ ಸಾವು
ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.
ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.
ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ