Poultry Shed Subsidy: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರು ಕೋಳಿ ಸಾಕಾಣಿಕೆಯನ್ನು ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿ ಮೂಲಕ ನರೇಗಾ ಯೋಜನೆಯಡಿ ರೂ 60,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದೆ.
ನಾಟಿ ಕೋಳಿ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆಯು ಒಂದು ಉತ್ತಮ ಉಪ ಆದಾಯ ತರಬಲ್ಲ ಚಟುವಟಿಕೆಯಾಗಿದ್ದು, ಗ್ರಾಮೀಣ ಪ್ರದೇಶದ ಕೃಷಿಕರು ಕೃಷಿ ಬೆಳೆಯನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ, ಕೋಳಿ ಸಾಕಾಣಿಕೆಯನ್ನು ಮಾಡುವುದರಿಂದ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.
ಅರ್ಹತೆಗಳು:
* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಗ್ರಾಮೀಣ ಭಾಗದ ನಿವಾಸಿಯಾಗಿರಬೇಕು.
* ಅರ್ಜಿದಾರ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಪಿಎಲ್ ಪಡಿತಾ ಚೀಟಿ ಹೊಂದಿರಬೇಕು.
* ಅರ್ಜಿದಾರ ಅಭ್ಯರ್ಥಿಗಳು ಗ್ರಾಮ ಪಂಚಾಯತಿ ಕಚೇರಿಯಲ್ಲಿ ತಮ್ಮ ಕುಟುಂಬದ ಸದಸ್ಯರ ಹೆಸರ ಮತ್ತು * ಅಗತ್ಯ ದಾಖಲೆಗಳನ್ನು ಸಲ್ಲಿಸಿ ಜಾಬ್ ಕಾರ್ಡ ಪಡೆದುಕೊಳ್ಳಬೇಕು.
* ಅರ್ಜಿದಾರರು ಕೋಳಿ ಶೆಡ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಹೊಂದಿರಬೇಕು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಕೋಳಿ ಶೆಡ್ ನಿರ್ಮಾಣಕ್ಕೆ ಸಹಾಯಧನ:
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆಗೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಕೂಲಿ ವೆಚ್ಚ ಮತ್ತು ಸಮಾಗ್ರಿ ವೆಚ್ಚ ಸೇರಿ ಒಟ್ಟು ರೂ 60,000/ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.
ಕೋಳಿ ಶೆಡ್ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಅವಶ್ಯವಿರುವ ದಾಖಲೆಗಳನ್ನು ತೆಗೆದುಕೊಂದು ನಿಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಮುಂದಿನ ವರ್ಷದ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರು ಹಾಗೂ ಕಾಮಗಾರಿಯನ್ನು ಸೇರಿಸಲು ಅರ್ಜಿಯನ್ನು ಸಲ್ಲಿಸಿ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಬೇಕಾಗುವ ದಾಖಲೆಗಳ ಪಟ್ಟಿ:
* ಆಧಾರ್ ಕಾರ್ಡ(Aadhar)
* ನರೇಗಾ ಜಾಬ್ ಕಾರ್ಡ(Job Card)
*ಅರ್ಜಿದಾರರ ಪೋಟೋ(Photo)
* ಆಧಾರ್ ಲಿಂಕ್ ಅಗಿರುವ ಬ್ಯಾಂಕ್ ಪಾಸ್ ಬುಕ್(Bank Pass Book)
* ಕುಟುಂಬದ ರೇಷನ್ ಕಾರ್ಡ(Ration Card)
* ಪಹಣಿ/ಉತಾರ್(RTC)
* ಪಶು ವೈದ್ಯಾಧಿಕಾರಿಯಿಂದ ಕೋಳಿ ಸಾಕಾಣಿಕೆ ದೃಡೀಕರಣ ಪ್ರಮಾಣ ಪತ್ರ

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Poultry Shed Subsidy:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





