(Pre Matric Scholarship) 2024-25ನೇ ಸಾಲಿನ ಎಸ್‌ಸಿಗಳು ಮತ್ತು ಇತರರ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಪರಿಶಿಷ್ಟಜಾತಿಗಳು ಮತ್ತು ಇತರೆ ಅವಕಾಶವಂಚಿತ ಸಮುದಾಯದ ಮಕ್ಕಳಿಗೆ ಶಾಲಾ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾಬಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಘಟಕ 1, ಘಟಕ 2 ಎಂದು ಎರಡು ವಿಭಾಗಗಳಲ್ಲಿ ನೀಡುತ್ತಿವೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ
ಘಟಕ 1 ವಿಭಾಗದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು:
* ಎಸ್‌ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಾಗಿರಬೇಕು.
* ಈ ಪಾಲಕರು/ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
* ಮಾನ್ಯತೆಯುಳ್ಳ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ವಾರ್ಷಿಕವಾಗಿ ರು.3,500 ರಿಂದ 7000 ವರೆಗೆ ವಾರ್ಷಿಕ ಶೈಕ್ಷಣಿಕ ಭತ್ಯೆ ನೀಡಲಾಗುತ್ತದೆ.
* ದಿವ್ಯಾಂಗ (ವಿಶೇಷಚೇತನ) ವಿದ್ಯಾರ್ಥಿಗಳಿಗೆ ಶೇ.10 ಹೆಚ್ಚುವರಿ ಭತ್ಯೆ ನೀಡಲಾಗುತ್ತದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಘಟಕ-2 ವಿಭಾಗದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು:
* ಈ ಸ್ವಚ್ಛತಾ ಕಾರ್ಯ ಮತ್ತು ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ವೃತ್ತಿಯಲ್ಲಿ ತೊಡಗಿಸಿಕೊಂಡಿರುವಂತ ಪಾಲಕರು/ ಪೋಷಕರನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸಬಹುದು. ಯಾವುದೇ ಆದಾಯ ಮಿತಿ ಇರುವುದಿಲ್ಲ.
* ಮಾನ್ಯತೆಯುಳ್ಳ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ವಾರ್ಷಿಕವಾಗಿ ರು.3,500 ರಿಂದ 8000 ವರೆಗೆ ವಾರ್ಷಿಕ ಸ್ಕಾಲರ್‌ಶಿಪ್ ಭತ್ಯೆ ನೀಡಲಾಗುತ್ತದೆ.
* ದಿವ್ಯಾಂಗ (ವಿಶೇಷಚೇತನ) ವಿದ್ಯಾರ್ಥಿಗಳಿಗೆ ಶೇ.10 ಹೆಚ್ಚುವರಿ ಭತ್ಯೆ ಕೊಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಈ ವಿದ್ಯಾರ್ಥಿಗಳು ತಾವು ವಾಸವಾಗಿರುವ ರಾಜ್ಯಗಳ ವಿದ್ಯಾರ್ಥಿವೇತನ ಪೋರ್ಟಲ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ ವಿಳಾಸ https://ssp.postmatric.karnataka.gov.in/ssppre/ ಗೆ ಭೇಟಿ ನೀಡಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಜಾತಿ ಪ್ರಮಾಣ ಪತ್ರ
* ಶಾಲೆಗೆ ದಾಖಲೆ ಪಡೆದ ಮಾಹಿತಿ
* ಜನ್ಮ ದಿನಾಂಕ ಪ್ರಮಾಣ ಪತ್ರ
* ಪಾಸ್ ಪೋರ್ಟ್ ಅಳತೆ ಭಾವಚಿತ್ರ
* ರೇಷನ್‌ಕಾರ್ಡ್ ಸ್ಕ್ಯಾನ್ ಕಾಪಿ
* ಇತರೆ
ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು
ಯೋಜನೆಯ ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡದ ವಿಸೃತ ವಿವರಗಳಿಗಾಗಿ http://socialjustice.gov.in ಗೆ ಭೇಟಿ ನೀಡಿರಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






