Price-Hike: ಕಾಫಿ ಪ್ರಿಯರಿಗೆ ಬಿಗ್ ಶಾಕ್ | ಕಾಫಿ ಪುಡಿ ಬೆಲೆ ಏರಿಕೆ..!

(Price-Hike:) ಕಾಫಿ ಪುಡಿ ಬೆಲೆ ಹೆಚ್ಚಾಗುತ್ತಿದ್ದು, ಕಾಫಿ ಪ್ರಿಯರಿಗೆ ಕಹಿ ಅನುಭವವಾಗತೊಡಗಿದೆ. ಹವದು, ಅ. 15ರಿಂದ ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ದುಬಾರಿಯಾಗಲಿದೆ. ಇಂಡಿಯನ್ ಕಾಫಿ ಟ್ರೇಡ್ ಅಸೋಸಿಯೇಶನ್ (ಐಸಿಟಿಎ) ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ.


ಇದನ್ನೂ ಓದಿ; ವಾಹನಕ್ಕೆ ಲೈಸೆನ್ಸ್‌, ಎಫ್‌ಸಿ ಇಲ್ಲದಿದ್ದರೂ ಪರಿಹಾರ; ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್‌ ಆದೇಶ


ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಇಳಿಕೆಯಾಗಿದೆ. ಹೀಗಾಗಿ ಬೆಲೆ ಏರಿಕೆ ಮಾಡುವುದು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಈಗಾಗಲೇ ಅರೇಬಿಕಾ ಮತ್ತು ರೋಬಸ್ಟಾ ಕಾಫಿಯ ಬೆಲೆಯಲ್ಲಿ ಏರಿಕೆಯಾಗಿದೆ. ಜಾಗತಿಕವಾಗಿ ಕಾಫಿಗೆ ಬೇಡಿಕೆ ಹೆಚ್ಚುತ್ತಿದೆ. ವಿವಿಧ ಅಂಶಗಳಿಂದ ಅದರ ಉತ್ಪಾದನೆಯು ಕಡಿಮೆಯಾಗಿದೆ. ಭಾರತೀಯ ಕಾಫಿಗೆ ಹೆಚ್ಚಿನ ಬೇಡಿಕೆಯಿದ್ದು, ಬೇಡಿಕೆಯನ್ನು ಪೂರೈಸಬೇಕಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕಾಫಿ ಬೀಜದ ಬೆಲೆ ಕೆಜಿಗೆ 200- 280 ರಿಂದ ಹೆಚ್ಚಾಗಿದೆ ಎಂದು ಐಸಿಟಿಎ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಅವರು ಹೇಳಿದ್ದಾರೆ.


ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ


ಐಸಿಟಿಎ ಪ್ರಕಾರ, ಭಾರತವು 3.5 ಲಕ್ಷ ಟನ್ ಗಳಷ್ಟು ಕಾಫಿಯನ್ನು ಉತ್ಪಾದಿಸುತ್ತದೆ, ಈ ಪೈಕಿ ಶೇ.70ರಷ್ಟು ಬೆಳೆಯು ರೊಬಸ್ಟಾ ತಳಿಯಾಗಿದೆ. ಒಟ್ಟು ಉತ್ಪಾದನೆಯಲ್ಲಿ ಸುಮಾರು ಒಂದು ಲಕ್ಷ ಟನ್ ದೇಶೀಯವಾಗಿ ಬಳಕೆಯಾಗುತ್ತದೆ. ಜನವರಿಯಿಂದ ಕಾಫಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ರೊಬಸ್ಟಾ ಕಾಫಿ ಬೆಲೆ ಕೆಜಿಗೆ 200 ರೂ.ನಿಂದ 420 ರೂ.ಗೆ ಮತ್ತು ಅರೇಬಿಕಾ ಕೆಜಿಗೆ 290 ರೂ.ನಿಂದ 465 ರೂ.ಗೆ ಏರಿಕೆಯಾಗಿದೆ. ಹವಾಮಾನ ಬದಲಾವಣೆಯಿಂದಾಗಿ ಕಾಫಿ ಉತ್ಪಾದನೆಯಲ್ಲಿ ಶೇ.೨೦ರಷ್ಟು ಕುಸಿತವಾಗಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ; ಆಧಾ‌ರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್‌; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ


ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆಗಳು ಹೆಚ್ಚಾದಾಗ ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆಗಳು ಹೆಚ್ಚಾಗುತ್ತವೆ. ಕಳೆದ ಮೂರು ವರ್ಷಗಳಲ್ಲಿ ಹಸಿರು ಕಾಫಿ ಉತ್ಪಾದನೆಯಲ್ಲಿ ಶೇ.40-50 ಹೆಚ್ಚಳವಾಗಿದೆ. ಉತ್ಪಾದನೆ ಹೆಚ್ಚಾದಾಗ ಕಾಫಿ ಬೆಲೆಯಲ್ಲಿ ತಿದ್ದುಪಡಿ ಆಗುತ್ತದೆ. ಹೆಚ್ಚುತ್ತಿರುವ ಬೇಡಿಕೆಯ ದೃಷ್ಟಿಯಿಂದ ಕಲಬೆರಕೆ ಸಾಧ್ಯತೆಗಳಿರುವುದರಿಂದ ಚಿಕೋರಿ ಮಿಶ್ರಣದ ಮೇಲೆ ನಿಗಾ ಇಡಬೇಕು ಎಂದು ಕಾಫಿ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಪಡೆಯಬಹುದು ವಿವಿಧ ಸೌಲಭ್ಯ


ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪ್ರಕಾರ, ಕಾಫಿಯೊಂದಿಗೆ ಚಿಕೋರಿ ಮಿಶ್ರಣವನ್ನು ಶೇ.49ರಷ್ಟು ಮಿಶ್ರಣ ಮಾಡಬಹುದು. ಆದಾಗ್ಯೂ, ವ್ಯಾಪಾರಿಗಳು ಕಾಫಿಯ ಸುವಾಸನೆ ಮತ್ತು ವಿನ್ಯಾಸವನ್ನು ಕಡಿಮೆ ಮಾಡುವುದರಿಂದ ಶೇ,20 ಕ್ಕಿಂತ ಹೆಚ್ಚು ಚಿಕೋರಿಯನ್ನು ಮಿಶ್ರಣ ಮಾಡುವುದಿಲ್ಲ. ಆದರೆ, ಇದೀಗ ಕಾಫಿ ಬೆಲೆ ಏರಿಕೆಯಿಂದ ಚಿಕೋರಿ ಮಿಶ್ರಣವೂ ಹೆಚ್ಚಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ನಿಗಾ ವಹಿಸುವುದು ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Price-Hike: ಕಾಫಿ ಪ್ರಿಯರಿಗೆ ಬಿಗ್ ಶಾಕ್ | ಕಾಫಿ ಪುಡಿ ಬೆಲೆ ಏರಿಕೆ..!
Price-Hike: ಕಾಫಿ ಪ್ರಿಯರಿಗೆ ಬಿಗ್ ಶಾಕ್ | ಕಾಫಿ ಪುಡಿ ಬೆಲೆ ಏರಿಕೆ..!

ಇದನ್ನೂ ಓದಿ; ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 3 ಲಕ್ಷ ಸಾಲ ಸೌಲಭ್ಯ; ಅರ್ಜಿ ಸಲ್ಲಿಸಲು ಅರ್ಹತೆ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!