(Principal:) ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
(Principal:) ರಾಜ್ಯ ಸರ್ಕಾರದ ಆದೇಶ ಪತ್ರದಲ್ಲಿ ಏನಿದೆ?:
310 ಪ್ರಾಂಶುಪಾಲರು (ಯು.ಜಿ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧದಲ್ಲಿ ಒಟ್ಟು 779 ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳನ್ನು ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ರ ನಿಯಮ 3(1) ರಲ್ಲಿ ತಿಳಿಸಿರುವಂತೆ ಪರಿಶೀಲಿಸಿ, ಈ ಕಛೇರಿಯ ದಿನಾಂಕ:18-06-2025 ರ ಅಧಿಕೃತ ಜ್ಞಾಪನದಲ್ಲಿ ಶೈಕ್ಷಣಿಕವಾಗಿ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ-1 ರಂತೆ ಹಾಗೂ ಶೈಕ್ಷಣಿಕವಾಗಿ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ-2 ರಂತೆ ಪ್ರಕಟಿಸಿ, ಸಂಬಂಧಿಸಿದವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ, ಉಲ್ಲೇಖ-(7)ರಲ್ಲಿ ಸ್ವೀಕೃತವಾದ ಆಕ್ಷೇಪಣೆಗಳಲ್ಲಿ ಮತ್ತು ಅಹವಾಲು ಸಲ್ಲಿಸುವ ಸಂದರ್ಭದಲ್ಲಿ ಸಮಿತಿಯ ಮುಂದೆ ಮೌಖಿಕವಾಗಿ ಸಲ್ಲಿಸಿದ ಆಕ್ಷೇಪಣೆಗಳಲ್ಲಿ ಶೈಕ್ಷಣಿಕವಾಗಿ ಅರ್ಹರಾಗಿರುವ ಪಟ್ಟಿಯಲ್ಲಿನ ಕೆಲವು ಅಭ್ಯರ್ಥಿಗಳ ಅರ್ಹತೆಯನ್ನು ಮರು ಪರಿಶೀಲಿಸಲು ಕೋರಿರುತ್ತಾರೆ. ಅದರಂತೆ ಪರಿಶೀಲಿಸಲಾಗಿ, ಈ ಕೆಳಕಂಡ ಅಭ್ಯರ್ಥಿಗಳನ್ನು ದಿನಾಂಕ:18.06.2025 ರ ಈ ಕಛೇರಿಯ ಅಧಿಕೃತ ಜ್ಞಾಪನದ ಅನುಬಂಧ-1 ರಲ್ಲಿ ಶೈಕ್ಷಣಿಕವಾಗಿ ಅರ್ಹರ ಪಟ್ಟಿಯಲ್ಲಿ ಪ್ರಕಟಿಸಲಾಗಿರುವುದನ್ನು ಹಿಂಪಡೆದು, ಅನುಬಂಧ-2 ರ ಶೈಕ್ಷಣಿಕವಾಗಿ ಆನರ್ಹರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಈ ಪುಕಾರವಾಗಿ ಅನರ್ಹಗೊಳಿಸಲಾದ ಅಭ್ಯರ್ಥಿಗಳ ವಿವರಗಳನ್ನು ಅನುಬಂಧ-2 ರ ಹೆಚ್ಚುವರಿ ಪಟ್ಟಿಯಲ್ಲಿ ನಮೂದಿಸಿ, ಇದರೊಂದಿಗೆ ಲಗತ್ತಿಸಿದೆ.
ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ
ಈ ರೀತಿ ಶೈಕ್ಷಣಿಕವಾಗಿ ಅನರ್ಹರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿರುವುದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅವುಗಳನ್ನು ಇದರೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ Scan ಮಾಡಿ pdf file ಅನ್ನು ಅಭ್ಯರ್ಥಿಗಳು ಕೆ.ಇ.ಎ.ಗೆ ನೀಡಿರುವ ತಮ್ಮ ಅಧಿಕೃತ ಇ-ಮೇಲ್ ವಿಳಾಸದ ಮೂಲಕ dceprincipals@gmail.com ಗೆ 05 ದಿನಗಳ ಒಳಗಾಗಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Principal:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





