ಸಾಗರ; (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ವೃದ್ದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ; ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್
ಇದನ್ನೂ ಓದಿ; ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಬಸ್ ನಲ್ಲಿದ್ದ 25ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹಿಂದೂ ಯುವಕನ ಬರ್ಬರ ಹತ್ಯೆ; ನಾಲ್ವರು ಹಂತಕರು ಅಂದರ್
- ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಾವು
- ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಪ್ರಾಣಾಪಾಯದಿಂದ ಪಾರು
ಬೆಂಗಳೂರಿನಿಂದ ಪ್ರವಾಸಕ್ಕೆ ಆಗಮಿಸಿದ್ದ ಈ ಮಿನಿ ಬಸ್’ನಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಇದ್ದರು ಎನ್ನಲಾಗಿದೆ. ಕೊಲ್ಲೂರಿನಿಂದ ಸಿಗಂಧೂರಿಗೆ ತೆರಳುತ್ತಿದ್ದ ವೇಳೆ, ಹೊಸಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.