Prize Money Scholarship: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್

Prize Money Scholarship: ಕರ್ನಾಟಕ ಸರ್ಕಾರದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವನ್ನು ಒದಗಿಸಿದೆ. ‘ಪ್ರೋತ್ಸಾಹ ಧನ ಯೋಜನೆ’ಯಡಿ SSLC ಯಿಂದ ಸ್ನಾತಕೋತ್ತರ ಪದವಿವರೆಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ 7,500 ರಿಂದ 50,000 ರೂಪಾಯಿಗಳವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ನೇರವಾಗಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.ಪ್ರೋತ್ಸಾಹಧನ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದ ಮೂಲಕ ತಿಳಿಸಲಾಗಿದೆ.

ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಪರಿಶಿಷ್ಟ ಪಂಗಡದ ಅಂದರೆ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಆಸಕ್ತಿ ಹೊಂದಿ ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದು ಹಣದ ಕೊರತೆಯಿಂದಾಗಿ ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಇಂತಹ ಒಂದು ದುರದೃಷ್ಟಿಯಿಂದ ಈ ಯೋಜನೆ ಜಾರಿಗೆ ತಂದಿದೆ. ಯಾವುದೇ ಪ್ರತಿಭಾವಂತ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು,ವಿದ್ಯಾರ್ಥಿಗಳನ್ನ ಪ್ರೇರಿಪಿಸಬೇಕು ಎನ್ನುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಪ್ರೋತ್ಸಾಹ ಧನ ಯೋಜನೆ’ ಈ ಯೋಜನೆ ಅಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಪ್ರೇರೇಪಿಸುವ ಒಂದು ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ SSLC, PUC, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ. ಶೈಕ್ಷಣಿಕ ಹಂತಕ್ಕೆ ಅನುಗುಣವಾಗಿ 7,500 ರೂಪಾಯಿಗಳಿಂದ ಗರಿಷ್ಠ 50,000 ರೂಪಾಯಿಗಳವರೆಗೆ ಏಕಕಾಲದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತಿದ್ದು, ಪ್ರತಿಭೆಯನ್ನು ಗೌರವಿಸಿ ಅವರ ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸುವುದಾಗಿದೆ.

Prize Money Scholarship: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್
Prize Money Scholarship: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Prize Money Scholarship:)

    1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
    2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
    3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
    4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
    5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ