(Property Secure) ಈಗಾಗಲೇ ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಜಮೀನು ಮಾಲೀಕರ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ ಆರಂಭಿಸಿದೆ.
ಇದುವರೆಗೆ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಎಷ್ಟು ಮಂದಿ ಇದ್ದಾರೆ. ಸರ್ಕಾರದ ಸೌಲಭ್ಯ ಪಡೆಯಲು ಅರ್ಹತೆ ಇರುವವರು ಎಷ್ಟು ಮಂದಿ ಎನ್ನುವ ಮಾಹಿತಿ ಸಂಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಪಹಣಿಗಳಿಗೆ ಆಧಾರ್ ಜೋಡಣೆಯಿಂದ ಏನು ಲಾಭ:
ಒಬ್ಬ ರೈತ ಬೇರೆ ಬೇರೆ ಸರ್ವೆ ನಂಬರ್ ಗಳಲ್ಲಿ ಭೂಮಿ ಹೊಂದಿದ್ದರೆ ಆಧಾರ್ ಜೋಡಣೆಯಿಂದ ಎಲ್ಲಾ ಮಾಹಿತಿಗಳು ಒಂದೇ ಕಡೆ ಸಿಗುತ್ತವೆ. ಒಟಿಪಿ ಆಧಾರಿತ ಇ-ಕೆವೈಸಿ, ಕೃಷಿ ಜಮೀನು ಮಾಲೀಕರ ಭಾವಚಿತ್ರವನ್ನು ಹಳ್ಳಿಹಳ್ಳಿಗೂ ತೆರಳಿ ಕಂದಾಯ ವೃತ್ತದ ಗ್ರಾಮ ಆಡಳಿತ ಅಧಿಕಾರಿಗಳು ಸೆರೆ ಹಿಡಿಯುತ್ತಾರೆ.
ಪಹಣಿಯಲ್ಲಿ ಸದ್ಯ ಆಧಾರ್ ಸಂಖ್ಯೆ ನಮೂದಾಗಿರುತ್ತದೆ. ಈಗ ಪಡೆಯುವ ಫೋಟೋ ಮಾಲೀಕರ ಆಸ್ತಿ ವಿವರಗಳೊಂದಿಗೆ ಸಂಗ್ರಹವಾಗಿರುತ್ತದೆ. ಒಂದೇ ಸರ್ವೇ ನಂಬರ್ ನ ಭೂಮಿಯನ್ನು ಸಹೋದರರು, ಸಹೋದರಿಯರು ಹಂಚಿಕೊಂಡಿದ್ದು, ಜಂಟಿ ಖಾತೆ ಹೊಂದಿದ್ದರೆ ಎಷ್ಟು ಜನ ವಾರಸುದಾರರು ಇರುತ್ತಾರೋ ಅಷ್ಟು ಮಂದಿ ಪ್ರತ್ಯೇಕವಾಗಿ ಆಧಾರ್ ಮತ್ತು ಫೋಟೋ ನೀಡುವುದು ಕಡ್ಡಾಯ.
ಇದನ್ನೂ ಓದಿ: ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇದಲ್ಲದೇ ಗ್ರಾಮಾಧಿಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ. ಆಧಾರ್ ಸಂಖ್ಯೆ ಮತ್ತು ಫೋಟೋ ಜೋಡಣೆ ಆಗುವುದರಿಂದ ಜಮೀನು ಸುರಕ್ಷಿತವಾಗಿರುತ್ತದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವುದು ತಪ್ಪುತ್ತದೆ. ಇದರಿಂದ ಅಮಾಯಕ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.








Leave a Reply