Property Tax: ಆಸ್ತಿ ತೆರಿಗೆ ಪಾವತಿಸದಿದ್ದರೆ ಬೀಳಲಿದೆ ಭಾರಿ ದಂಡ!

(Property Tax:) ಕರ್ನಾಟಕದ ಗ್ರಾಮೀಣ ಭಾಗದ ನಾಗರಿಕರಿಗೆ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಮಹತ್ವದ ಸೂಚನೆ ನೀಡಿದೆ. 2025–26ನೇ ಸಾಲಿನ ಮನೆ, ಕಟ್ಟಡ, ನಿವೇಶನ ಹಾಗೂ ನೀರಿನ ತೆರಿಗೆ ಪಾವತಿಸಲು 2026ರ ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಅನ್ವಯ, ಪ್ರತಿ ಹಣಕಾಸು ವರ್ಷದ ತೆರಿಗೆಯನ್ನು ಗಡುವಿನೊಳಗೆ ಪಾವತಿಸುವುದು ಕಡ್ಡಾಯ. ಮಾರ್ಚ್ 31ರ ಗಡುವು ಮೀರಿದಲ್ಲಿ ಬಾಕಿ ಇರುವ ಒಟ್ಟು ಮೊತ್ತದ ಮೇಲೆ ಶೇಕಡಾ 5 ರಷ್ಟು ದಂಡ ವಿಧಿಸಲಾಗುತ್ತದೆ. ಅನಗತ್ಯ ಆರ್ಥಿಕ ನಷ್ಟ ತಪ್ಪಿಸಲು ತಕ್ಷಣ ತೆರಿಗೆ ಪಾವತಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಮನೆಯಲ್ಲೇ ತೆರಿಗೆ ಪಾವತಿ:
ಡಿಜಿಟಲ್ ವ್ಯವಸ್ಥೆಯ ಮೂಲಕ ಪಂಚಾಯತ್ ಕಚೇರಿಗೆ ತೆರಳುವ ಅವಶ್ಯಕತೆಯಿಲ್ಲ. ಬಾಪೂಜಿ ಸೇವಾ ಕೇಂದ್ರ (BSK) ಸೇವೆಯ ಮೂಲಕ ಮನೆಯಲ್ಲೇ ಸುರಕ್ಷಿತವಾಗಿ ಆನ್‌ಲೈನ್ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.


ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


1: PhonePe, Google Pay, BHIM ಅಥವಾ Paytm ಅಪ್ಲಿಕೇಶನ್ ತೆರೆಯಿರಿ.
2: ‘Payments’ ಅಥವಾ ‘Bill Pay’ ವಿಭಾಗದಲ್ಲಿ BSK ಆಯ್ಕೆಯನ್ನು ಆರಿಸಿ. ನಿಮ್ಮ ಆಸ್ತಿಗೆ ಸಂಬಂಧಿಸಿದ ಬಾಕಿ ತೆರಿಗೆ ಮೊತ್ತ ಕಾಣಿಸುತ್ತದೆ.
3: UPI PIN ನಮೂದಿಸಿ ಪಾವತಿಯನ್ನು ಪೂರ್ಣಗೊಳಿಸಿ.
4: ಪಾವತಿ ಯಶಸ್ವಿಯಾದ ಬಳಿಕ ಅಧಿಕೃತ ರಸೀದಿಯನ್ನು bsk.karnataka.gov.in ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

Property Tax: ಆಸ್ತಿ ತೆರಿಗೆ ಪಾವತಿಸದಿದ್ದರೆ ಬೀಳಲಿದೆ ಭಾರಿ ದಂಡ!
Property Tax: ಆಸ್ತಿ ತೆರಿಗೆ ಪಾವತಿಸದಿದ್ದರೆ ಬೀಳಲಿದೆ ಭಾರಿ ದಂಡ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Property Tax:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ