Propertys;- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ಆದೇಶ

(Propertys;-) ನೋಂದಣಿ ಅಕ್ರಮಕ್ಕೆ ಕಡಿವಾಣ ಹಾಕಲು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರ್ಕಾರ ಭೌಗೋಳಿಕ ದತ್ತಾಂಶ (ಜಿಐಎಸ್) ಆಧಾರಿತ ತಂತ್ರಾಂಶ ರೂಪಿಸಲು ಮುಂದಾಗಿದೆ. ನೋಂದಣಿಯ ಸಂದರ್ಭದಲ್ಲಿ ನಿರ್ದಿಷ್ಟ ಆಸ್ತಿ ಇರುವ ಪ್ರದೇಶ ಯಾವ ರಸ್ತೆಗೆ ಸೇರಿದೆ ಎಂಬುದನ್ನು ಲೆಕ್ಕಹಾಕಿ ಅದರ ಪ್ರಕಾರ ಮುದ್ರಾಂಕ ಶುಲ್ಕ ವಸೂಲಿ ಮಾಡಿ ತೆರಿಗೆ ಹೆಚ್ಚಳ ಗುರಿ ಹೊಂದಲಾಗಿದೆ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ತರಲಿದ್ದು, ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಿದೆ. ಬಳಿಕ ಹಂತ ಹಂತವಾಗಿ ನಗರಗಳಿಗೆ ವಿಸ್ತರಿಸಲಾಗುತ್ತದೆ. ಇನ್ನು 15 ದಿನದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಹೊಸದುರ್ಗ, ನೆಲಮಂಗಲ ತಾಲೂಕುಗಳಲ್ಲಿ ಜಾರಿಗೆ ಬರಲಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುವುದು.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?


ನೋಂದಣಿಯಾಗುವ ಆಸ್ತಿ ಎಲ್ಲಿ ಇದೆ ಎನ್ನುವುದರ ಮೇಲೆ ನಿಗಾ ವಹಿಸಲಿದ್ದು ಎನ್ನು ಪ್ರದೇಶ ಮಾರಾಟ ಎನ್ನುವ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ. ಸ್ವಯಂ ಚಾಲಿತವಾಗಿ ಮುದ್ರಾಂಕ ದರದ ಲೆಕ್ಕಾಚಾರ ನಡೆಯಲಿದ್ದು, ದರ ಪಾವತಿಸಿ ದಾಖಲೆಗಳನ್ನು ಸಲ್ಲಿಸಿದ ನಂತರ ನೋಂದಣಿ ಮಾಡಲಾಗುವುದು. ಮುದ್ರಾಂಕಕ್ಕೆ ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಎಷ್ಟು ಪ್ರದೇಶ ಮಾರಾಟ ಎಂದು ನಮೂದಿಸಿದರೆ ದರ ನಿಗದಿಯಾಗುತ್ತದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಇನ್ನು ಈ ವ್ಯವಸ್ಥೆ ಮೋಸ ತಡೆಗಟ್ಟಲು ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ ಹೊಸ ತಂತ್ರಾಂಶದ ಮೂಲಕ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

Propertys;- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ಆದೇಶ
Propertys;- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ಆದೇಶ

ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!


ಇತ್ತೀಚಿನ ಜನಪ್ರಿಯ ಸುದ್ದಿಗಳು