ಹಾಸನ/ಹಿರೀಸಾವೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳನ್ನು ಹಿರೀಸಾವೆ ಪೊಲೀಸರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ. ಚಾಲಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನಿಸಿದಾಗ ಕಂಟೈನರ್ ಬ್ಯಾಡರಹಳ್ಳಿ ಬಳಿ ಉರುಳಿ ಬಿದ್ದಿದೆ.
ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು
ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ಸಾವು, ಮತ್ತೊಬ್ಬ ಗಂಭೀರ
ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ್, ತಮ್ಮ ಸಿಬ್ಬಂದಿಯೊಂದಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಮಯದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಮಿನಿ ಕಂಟೈನರ್‌ನಲ್ಲಿ ಕರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿರುವ ಮಾಹಿತಿ ಸಿಕ್ಕಿತ್ತು.
ಹಿರೀಸಾವೆ ಸಮೀಪ ಪೊಲೀಸರು ವಾಹನವನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಚಾಲಕ ನಿಲ್ಲಿಸದೇ, ಅತಿವೇಗವಾಗಿ ಕಂಟೈನರ್ ಚಲಾಯಿಸಿದ್ದಾನೆ. ನಂತರ ರಾಷ್ಟ್ರೀಯ ಹೆದ್ದಾರಿಯಿಂದ ತುರುವೇಕೆರೆ ಕಡೆಯ ಸಂಪರ್ಕ ರಸ್ತೆಗೆ ಕಂಟೈನರ್ ಸಂಚರಿಸಿದ ಬ್ಯಾಡರಹಳ್ಳಿ ಗ್ರಾಮದ ತಿರುವಿನಲ್ಲಿ ವಾಹನ ನಿಯಂತ್ರಣಕ್ಕೆ ಸಿಗದೇ, ರಸ್ತೆ ಪಕ್ಕದ ಲಕ್ಷಣಗೌಡ ಎಂಬುವವರ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಬಾಲಕ ಮತ್ತು ಇನ್ನೊಬ್ಬ ಕತ್ತಲೆಯಲ್ಲಿ ಓಡಿಹೋಗಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಲಾರಿಯ ಹೆಡ್ ಲೈಟ್ ಫೋಕಸ್ ಗೆ ಸ್ಕಿಡ್ ಆದ ಬೈಕ್; ಗಂಭೀರ ಗಾಯ
- ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡ ವೈ ಎಸ್ ವಿ ದತ್ತಾ; ರಾಜಕೀಯದಿಂದಲೂ ನಿವೃತ್ತಿ
- ಹಿಂದಿನ ಶಾಸಕರು ಹಾಗೂ ಅವರ ಬಾವನಿಂದ ಪ್ರಜಾಪ್ರಭುತ್ವದ ಕಗ್ಗೊಲೆ
ಕಂಟೈನರ್‌ನಲ್ಲಿ 40 ಕರುಗಳ ಕಾಲು ಕಟ್ಟಿ, ತುಂಬಲಾಗಿತ್ತು. ಅದರಲ್ಲಿ 7 ಮೃತಪಟ್ಟಿವೆ. 33 ಕರುಗಳನ್ನು ಪೊಲೀಸ್ ಠಾಣೆಯ ಆವರಣದಲ್ಲಿ ಕಟ್ಟಲಾಗಿತ್ತು. ಪಶುಪಾಲನಾ ಇಲಾಖೆ ವೈದ್ಯ ಡಾ.ಬಿ.ಜಿ. ಶ್ರೀಧರ್ ಸ್ಥಳಕ್ಕೆ ಬಂದು, ಅವುಗಳ ಆರೋಗ್ಯ ತಪಾಸಣೆ ನಡೆಸಿದರು. ಒಂದರಿಂದ ಒಂದೂವರೆ ವರ್ಷ ವಯಸ್ಸಿನ 4 ಎಮ್ಮೆ ಕರುಗಳು, 29 ಹಸುವಿನ ಕರುಗಳಿವೆ ಎಂದು ಮಾಹಿತಿ ನೀಡಿದರು.
ಈ ಕರುಗಳನ್ನು ಕಡೂರಿನ ಗೋಶಾಲೆಗೆ ಬಿಡಲಾಗುವುದು. ಲಾರಿ ಮಾಲೀಕ ಸೇರಿದಂತೆ 3 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಇದನ್ನೂ ಓದಿ; ಮಡಿಕೇರಿಯ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ
ಇದನ್ನೂ ಓದಿ; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು
ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’
ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.
ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20 ಲಕ್ಷ ರೂ.ಗಳ ಬೇಡಿಕೆ
ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.