Tuesday, November 28, 2023
Homeಉದ್ಯೋಗಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆ: ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆ: ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಖಾಲಿ ಇರುವ ಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನವಾಗಿದೆ.

ಈ ಹುದ್ದೆಗೆ ರೂ.25,೦೦೦/- ಗಳ ಸಂಚಿತ ವೇತನ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಆರ್ಹರಿರುವ ಅಭ್ಯರ್ಥಿಗಳು ಸಂಬoಧಿಸಿದ ದಾಖಲಾತಿಗಳನ್ನು ಆಗಸ್ಟ್ 19ರ ಸಂಜೆ 5 ಗಂಟೆಯೊಳಗೆ ಅಧೀಕ್ಷಕರು, ಜಿಲ್ಲಾ ಕಾರಾಗೃಹ, ಚಿತ್ರದುರ್ಗ ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಆರ್. ಪ್ರಸನ್ನ ರವರು ತಿಳಿಸಿದ್ದಾರೆ.

Most Popular

Recent Comments