PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2, ದಿನಾಂಕ ವಿಸ್ತರಣೆ

(PUC Exam-2) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸದಿರುವ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


2024 ರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು 18-04-2024 ರ ಸಂಜೆ 5-00 ಗಂಟೆಯವರೆಗೆ ವಿಸ್ತರಿಸಲಾಗಿರುತ್ತದೆ ಎಂದಿದ್ದಾರೆ. ಅಲ್ಲದೆ 2024 ನೇ ಸಾಲಿನ ದ್ವಿತೀಯ ಪರೀಕ್ಷೆ-1 ಹಾಜರಾತಿ ಕೊರತೆಯಿಂದ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರುವವರು ಹಾಗೂ 2024 ರ ಮಾರ್ಚ್ 31 ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಹ ವಿದ್ಯಾರ್ಥಿಗಳು 2024 ನೇ ಸಾಲಿನ ದ್ವಿತೀಯ ಪರೀಕ್ಷೆ-2 ಗೆ ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಿಕೊಳ್ಳಲು ಏಪ್ರಿಲ್ 18 ಕೊನೆಯ ದಿನಾಂಕವಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.


ಇದನ್ನೂ ಓದಿ: ಉದ್ಯೋಗಕ್ಕಾಗಿ ನೀಡುವ ರೆಸ್ಯೂಮ್‌ ಈ ಕಾರಣಗಳಿಂದ ರಿಜೆಕ್ಟ್‌ ಆಗಬಹುದು.. ಎಚ್ಚರ!; ಜಾಬ್‌ಗೆ ಶಾರ್ಟ್‌ ಲಿಸ್ಟ್‌ ಆಗದಿರಲು ಸಾಮಾನ್ಯ ಕಾರಣಗಳೇನು?;  ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ


ಇನ್ನು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಈ ಹಿಂದೆ ಮಂಗಳವಾರದವರೆಗೂ ಅವಕಾಶವಿತ್ತು. ಇನ್ನೂ ಎರಡು ದಿನ ಅವಕಾಶ ನೀಡಲಾಗಿದೆ. ಏಪ್ರಿಲ್ 18 ರ ಗುರುವಾರ ಸಂಜೆ 5 ರ ಒಳಗಾಗಿ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಲು ಅವಕಾಶ ನೀಡಲಾಗಿದೆ. ತಮ್ಮ ಕಾಲೇಜುಗಳ ಮೂಲಕ ಅಥವಾ ಕೆ.ಎಸ್‌.ಇ.ಎ.ಬಿ ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ; ಯಾವೆಲ್ಲಾ ಯೋಜನೆಗಳಿಗೆ, ಇಲ್ಲಿದೆ ಡಿಟೈಲ್ಸ್


PUC Exam-2:  ದ್ವಿತೀಯ ಪಿಯುಸಿ ಪರೀಕ್ಷೆ-2, ದಿನಾಂಕ ವಿಸ್ತರಣೆ
PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2, ದಿನಾಂಕ ವಿಸ್ತರಣೆ