(PUC Exam: ) ರಾಜ್ಯದಲ್ಲಿ ನಾಳೆ (ಮಾರ್ಚ್ 1) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1 ಶುರುವಾಗುತ್ತಿದ್ದು, ಈ ಪರೀಕ್ಷೆಯನ್ನು ಗೊಂದಲವಿಲ್ಲದಂತೆ ಸುಸೂತ್ರವಾಗಿ ನಡೆಸುವುದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಗಳು ಈಗಾಗಲೇ ಸಿದ್ಧತೆ ಅಂತಿಮಗೊಳಿಸಿವೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಯಾವುದೇ ಕೊಠಡಿಯಲ್ಲಿ ವಿದ್ಯಾರ್ಥಿ ಮಾತನಾಡುವುದು, ನಕಲು ಮಾಡುವುದು, ಕಾಪಿ ಚೀಟಿ ಇಟ್ಟುಕೊಂಡು ಪರೀಕ್ಷೆ ಬರೆಯುವುದು ಇತರೆ ಯಾವುದೇ ಅಕ್ರಮ ನಡೆದರೆ ಅದನ್ನು ವೆಬ್ ಕಾಸ್ಟಿಂಗ್ ಮೂಲಕ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗಳಲ್ಲಿ ಗಮನಿಸಬಹುದು. ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
7.13 ಲಕ್ಷ ವಿದ್ಯಾರ್ಥಿಗಳ ನೋಂದಣಿ:
7.13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. 34,071 ಪುನರಾವರ್ತಿತ, 18,317 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ಐವರು ತೃತೀಯ ಲಿಂಗಿಗಳಿದ್ದಾರೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿ ಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸಬೇಕು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿ ಟಿವಿ ಅಳವಡಿಸಬೇಕು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಎರಡು ಗಂಟೆ ಮುಂಚಿತವಾಗಿ ಬೆಳಿಗ್ಗೆ 8ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…
(PUC Exam:) ಈ ನಿಯಮ ಪಾಲನೆ ಕಡ್ಡಾಯ:
* ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
* ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
* ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
* ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
* ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
* ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
* ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ
* ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ
ದ್ವಿತೀಯ ಪಿಯುಸಿ ಪರೀಕ್ಷೆ 2025 ರ ವೇಳಾಪಟ್ಟಿ:
ಮಾ.1 ರಂದು ಕನ್ನಡ, ಅರೇಬಿಕ್
ಮಾ.3 ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.7 ರಂದು ಇತಿಹಾಸ, ಭೌತಶಾಸ್ತ್ರ,
ಮಾ. 10 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ
ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
ಮಾ.13 ರಂದು ಅರ್ಥಶಾಸ್ತ್ರ
ಮಾ.15 ರಂದು ಇಂಗ್ಲಿಷ್
ಮಾ.17 ರಂದು ಭೂಗೋಳಶಾಸ್ತ್ರ
ಮಾ.18 ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ
ಮಾ. 19 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್
ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾ.20 ರಂದು ಹಿಂದಿ

ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





