ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಇಲಾಖೆ ತಿಳಿಸಿದೆ.
ಪುಲ್ವಾಮದಲ್ಲಿರುವಂತಹ ನಾಗ್ಬೆರನ್-ಟಾರ್ಸಾರ್ ಅರಣ್ಯ ಪ್ರದೇಶಗಳಲ್ಲಿ ಉಗ್ರರು ಅಡಗಿ ಕುಳಿತಿರುವಂತಹ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಯು ಸ್ಥಳದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿತು.
ಭಾರತೀಯ ಸೇನಾಪಡೆಗಳು ಕಾರ್ಯಾಚರಣೆಯನ್ನು ಆರಂಭಿಸುತ್ತಿದ್ದoತೆಯೇ ಅಡಗಿ ಕುಳಿತಿದ್ದಂತಹ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಕೂಡಲೇ ಸ್ಥಳದಲ್ಲಿ ಎನ್ಕೌಂಟರ್ ಆರಂಭಿಸಿದ ಸೇನಾಪಡೆಯು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಇನ್ನೂ ಆ ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.