(Puneet Hridayajyoti:) ಮಂಗಳೂರು: ಕನ್ನಡದ ಖ್ಯಾತ ನಟ ದಿವಂಗತ Puneeth Rajkumar ಅವರ ಸ್ಮರಣಾರ್ಥ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ‘ಪುನೀತ್ ಹೃದಯಜ್ಯೋತಿ’ ಯೋಜನೆಯನ್ನು ಶೀಘ್ರದಲ್ಲೇ ರಾಜ್ಯದ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ರಾಜ್ಯ ಆರೋಗ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Dinesh Gundu Rao ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಪ್ರಸ್ತುತ 78 ಪುನೀತ್ ಹೃದಯಜ್ಯೋತಿ ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹೃದಯಾಘಾತಕ್ಕೊಳಗಾಗುವ ರೋಗಿಗಳಿಗೆ ಜೀವರಕ್ಷಕವಾಗಿ ಪರಿಣಮಿಸಿವೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರು ಕೇಂದ್ರಗಳು ಕಾರ್ಯಾಚರಿಸುತ್ತಿವೆ ಎಂದು ಮಾಹಿತಿ ನೀಡಿದರು.
ಈ ಯೋಜನೆಯಡಿ ಪ್ರಸಕ್ತ ವರ್ಷದಲ್ಲೇ ಸುಮಾರು 450 ಅಮೂಲ್ಯ ಜೀವಗಳನ್ನು ಉಳಿಸುವ ಕಾರ್ಯ ನಡೆದಿದೆ. ಹಠಾತ್ ಹೃದಯಾಘಾತ ಸಂಭವಿಸಿದಾಗ ‘ಗೋಲ್ಡನ್ ಅವರ್’ ಅವಧಿಯಲ್ಲಿ ರೋಗಿಗಳಿಗೆ ತ್ವರಿತ ಚಿಕಿತ್ಸೆ ನೀಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು.
ಹೃದಯಾಘಾತಕ್ಕೊಳಗಾದವರಿಗೆ ಅತ್ಯಂತ ದುಬಾರಿಯಾದ ‘ಟೆನೆಕ್ಟೆಪ್ಲೇಸ್’ (Tenecteplase) ಇಂಜೆಕ್ಷನ್ ಅನ್ನು ಸರ್ಕಾರ ಸಂಪೂರ್ಣ ಉಚಿತವಾಗಿ ನೀಡುತ್ತಿದೆ. ಜೊತೆಗೆ ಅಗತ್ಯ ಶಸ್ತ್ರಚಿಕಿತ್ಸೆ ಹಾಗೂ ಇತರ ಪೂರಕ ಚಿಕಿತ್ಸೆಗಳನ್ನೂ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Puneet Hridayajyoti:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply