Thursday, June 8, 2023
Homeಇತರೆಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸ್ಯಾಂಡಲ್ ವುಡ್ ನಮನ: ನವೆಂಬರ್ 16 ರಂದು...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸ್ಯಾಂಡಲ್ ವುಡ್ ನಮನ: ನವೆಂಬರ್ 16 ರಂದು ವಿಶೇಷ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ವಿಶೇಷ ನಮನವನ್ನು ಸಲ್ಲಿಸಲು ಸ್ಯಾಂಡಲ್ ವುಡ್ ಫಿಲ್ಮ್ ಚೇಂಬರ್ ನಿರ್ಧಾರ ಮಾಡಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು . ಈ ಕಾರ್ಯಕ್ರಮದಲ್ಲಿ ಸಿನಿಮಾ ತಾರೆಯರು ಮತ್ತು ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸ್ಯಾಂಡಲ್ ವುಡ್ ರಾಜಕುಮಾರನಿಗೆ ನಮನವನ್ನು ಸಲ್ಲಿಸಲು ದೊಡ್ಡ ಕಾರ್ಯಕ್ರಮಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಇದರಲ್ಲಿ ಪುನೀತ್ ಅವರಿಗೆ ವಿಶೇಷ ನಮನವನ್ನು ಸಲ್ಲಿಸಲಾಗುತ್ತದೆ. ನವೆಂಬರ್ 16 ಮಧ್ಯಾಹ್ನ 3 ಗಂಟೆಗೆ ನಡೆಯುವ ವಿಶೇಷ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಭರದಲ್ಲಿ ಸಿದ್ಧತೆಯನ್ನು ಮಾಡಿಕೊಂಡಿದ್ದು, ದಕ್ಷಿಣ ಭಾರತದ ಎಲ್ಲಾ ಕಲಾವಿದರು, ರಾಜ್ಯದ ಮುಖ್ಯಮಂತ್ರಿಗಳು, ಅನೇಕ ಗಣ್ಯರು ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಧ್ಯಮ ವರ್ಗದವರಿಗೆ ಮಾಹಿತಿಯನ್ನು ನೀಡಿದ್ದಾರೆ.

Most Popular

Recent Comments