ಮೈಸೂರು : ನಟ ಪುನೀತ್ ರಾಜ್ ಕುಮಾರ್ ರವರಿಗೆ ರವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ ಎಂದು ಸಿ ಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಕಬಿನಿ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಲು ಕಬಿನಿಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಿದರು.
ಪುನೀತ್ ರಾಜ್ ಕುಮಾರ್ ರವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆಲ್ಲರಿಗೂ ಅಪಾರವಾದ ಪ್ರೀತಿ, ಗೌರವ ಇದೆ. ಈ ವಿಚಾರವನ್ನು ಎಲ್ಲರೂ ಒಪ್ಪುತ್ತಾರೆ, ಪುನೀತ್ ಎಲ್ಲಾ ರೀತಿಯ ಗೌರವಾನ್ವಿತ ಪ್ರಶಸ್ತಿ ಪುರಸ್ಕಾರಗಳಿಗೆ ಅರ್ಹ ವ್ಯಕ್ತಿ. ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಎಲ್ಲರಿಗೂ ಗೌರವವಿದೆ. ಆದರೆ ಪ್ರಶಸ್ತಿಯನ್ನು ನೀಡಲು ಅದಕ್ಕೊಂದು ಪದ್ಧತಿ ಇದೆ. ಸರ್ಕಾರ ಎಲ್ಲವನ್ನು ಯೋಚನೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.