ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುನೀತ್ ರಾಜಕುಮಾರ್ ರವರ ಇಂದು ಮುಂಜಾನೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಕೂಡಲೇ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ಖಾಸಗಿ ಆಸ್ಪತ್ರೆಯ ವೈದ್ಯರು ನಡೆಸುತ್ತಿದ್ದು ಅಭಿಮಾನಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.