ಬೆಂಗಳೂರು : ಪುನೀತ್ ರಾಜ್ ಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಬರೆದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ರಿತ್ವಿಕ್ಸ್ ಎಂಬ ಆರೋಪಿ ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪುನೀತ್ ರವರ ಬಗ್ಗೆ ತೀರಾ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿ ಅವರಿಗೆ ಅವಮಾನ ಮಾಡಲಾಗಿತ್ತು.
ಪುನೀತ್ ನಿಧನದ ವಿಚಾರವಾಗಿ ಬೆಂಗಳೂರಿನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು ಇದರಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಭಾರತದ ಮಂದಿಗೆ ಕಿರಿಕಿರಿಯಾಗಿತ್ತು ಆದ್ದರಿಂದ ಪುನೀತ್ ರಾಜ್ ಕುಮಾರ್ ಗೆ ಅಗೌರವ ತೋರುವ ಪೋಸ್ಟ್ ಗಳನ್ನು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು,
ರಿತ್ವಿಕ್ಸ್ ಗೆ ನಿಷೇಧದ ನಡುವೆಯೂ ಲಿಕ್ಕರ್ ಸಿಕ್ಕಿತ್ತು ನಂತರ ಸಾಮಾಜಿಕ ತಾಣದಲ್ಲಿ ಬಿಯರ್ ಬಾಟಲಿಯ ಚಿತ್ರವನ್ನು ಹಂಚಿಕೊಂಡು ” ರಾಜಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ, ಆತನನ್ನು ನೆನಪಿಟ್ಟುಕೊಳ್ಳಿ, ಮರೆಯಬೇಡಿ ಯಾಕೆಂದರೆ ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ಮೂತ್ರ ಮಾಡುತ್ತೇವೆ ಎಂದು ಬರೆದುಕೊಂಡಿದ್ದ.
ಇದರಿಂದ ಕೋಪಗೊಂಡ ಅಭಿಮಾನಿಗಳು ಕೂಡಲೇ ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದರು, ಕೂಡಲೇ ಕಾರ್ಯಪ್ರವುತ್ತರಾದ ಸೈಬರ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆತನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಾಗರಾಜ್ ಪೊಲೀಸ್ ಆಯುಕ್ತ ಕಮಲ್ ಪಂತ್ ಬೆಂಗಳೂರು ಸಿ ಪೊಲೀಸ್ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದ್ದು ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.