PVTG scheme25 : ಮನೆ ನಿರ್ಮಾಣಕ್ಕೆ 3.75 ರೂ. ಲಕ್ಷ ಸಹಾಯಧನ

PVTG scheme25: ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ ಬುಡಕಟ್ಟು ವಸತಿ ಸೌಕರ್ಯ ಯೋಜನೆಯು ಕರ್ನಾಟಕದ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯಗಳಾದ ಕೊರಗ ಮತ್ತು ಜೇನುಕುರುಬ ಕುಟುಂಬಗಳಿಗೆ ಸುಸಜ್ಜಿತ ಸೂರು ಒದಗಿಸುವ ಒಂದು ಮಹತ್ವದ ಯೋಜನೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಸಹಯೋಗದೊಂದಿಗೆ ಜಾರಿಯಾಗುತ್ತಿರುವ ಈ ಯೋಜನೆಯಡಿ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಅರ್ಹ ಫಲಾನುಭವಿಗಳಿಗೆ ಪಕ್ಕಾ ಮನೆ ನಿರ್ಮಿಸಿಕೊಳ್ಳಲು ಪ್ರತಿ ಮನೆಗೆ 3.75 ಲಕ್ಷ ರೂ.ದವರೆಗೆ ಆರ್ಥಿಕ ಸಹಾಯಧನ ನೀಡಲಾಗುತ್ತದೆ.

ಈ ನೂತನ ವಸತಿ ಯೋಜನೆಯಡಿ, ಅರ್ಹ ಫಲಾನುಭವಿಗಳು ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲು 3.75 ಲಕ್ಷ ರೂ.ಗಳವರೆಗೆ ಸಹಾಯಧನ ಪಡೆಯಬಹುದು. ಕೇವಲ ವಸತಿ ಮಾತ್ರವಲ್ಲದೆ, ಈ ಯೋಜನೆಯು ಕುಡಿಯುವ ನೀರು, ವಿದ್ಯುತ್, ಆರೋಗ್ಯ ಕೇಂದ್ರಗಳು ಮತ್ತು ಜೀವನೋಪಾಯಕ್ಕಾಗಿ ಕೃಷಿ ಹಾಗೂ ಜೇನು ಸಾಕಾಣಿಕೆಯಂತಹ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡುವ ಮೂಲಕ ಬುಡಕಟ್ಟು ಜನರ ಅಭಿವೃದ್ಧಿ ಸಾಧಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಬಡವರಿಗೆ ಮನೆ ನಿರ್ಮಾಣ ಯೋಜನೆಗಳ ಲಾಭ ಮುಟ್ಟಬೇಕು ಎಂಬುದು ಸರ್ಕಾರದ ಆಸೆ. ಈ ನಿಟ್ಟಿನಲ್ಲಿ ಬುಡಕಟ್ಟು ಸಮುದಾಯಗಳಲ್ಲಿಯೇ ಅತ್ಯಂತ ಹಿಂದುಳಿದ ಮತ್ತು ದುರ್ಬಲ ವರ್ಗಗಳನ್ನು ಪಿ.ವಿ.ಟಿ.ಜಿ ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳು ಎಂದು ಗುರುತಿಸಲಾಗಿದ್ದು, ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸಲು ಮತ್ತು ಅವರಿಗೆ ಸುಸಜ್ಜಿತ ಸೂರು ಕಲ್ಪಿಸಲು ರಾಜ್ಯ ಸರ್ಕಾರ ಬುಡಕಟ್ಟು ವಸತಿ ಸೌಕರ್ಯ ಯೋಜನೆಯನ್ನು ಜಾರಿಗೊಳಿಸಿದೆ.

ಪ್ರಮುಖ ಉದ್ದೇಶಗಳು:
* ಈ ಯೋಜನೆಯು ಕೇವಲ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಾಗದೆ, ಬುಡಕಟ್ಟು ಜನಾಂಗದವರ ಸಾಮಾಜಿಕ ಮತ್ತು ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವ ಗುರಿಯನ್ನ ಹೊಂದಿದೆ.
* ಸ್ವಂತ ಮನೆ ಇಲ್ಲದ ಅರ್ಹ ಬುಡಕಟ್ಟು ಕುಟುಂಬಗಳನ್ನು ಗುರುತಿಸಿ ಅವರಿಗೆ ಸುಸಜ್ಜಿತವಾದ ‘ಪಕ್ಕಾ’ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ.
* ವಸತಿ ಸೌಕರ್ಯದ ಜೊತೆಗೆ, ಸಮುದಾಯದ ವಾಸಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ಬೀದಿ ದೀಪಗಳು ಮತ್ತು ಸುಸಜ್ಜಿತ ಶೌಚಾಲಯಗಳಂತಹ ಮೂಲಭೂತ ಸೌಕರ್ಯಗಳನ್ನುಒದಗಿಸಲಾಗಿದೆ.
* ಬುಡಕಟ್ಟು ಜನರ ಸಮಗ್ರ ಅಭಿವೃದ್ಧಿಗಾಗಿ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಗಳು ಮತ್ತು ಅವರ ಆದಾಯವನ್ನು ಹೆಚ್ಚಿಸುವಂತಹ ವಿವಿಧ ಆರ್ಥಿಕ ಚಟುವಟಿಕೆಗಳಿಗೆ ವಿಶೇಷ ಬೆಂಬಲ ನೀಡಲಾಗುತ್ತದೆ.
* ಸಂಶೋಧನೆಗಳ ಮೂಲಕ ಬುಡಕಟ್ಟು ಅವರ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಪ್ರಯತ್ನ ಮಾಡಲಾಗುತ್ತಿದ್ದೆ.

PVTG scheme25 : ಮನೆ ನಿರ್ಮಾಣಕ್ಕೆ 3.75 ರೂ. ಲಕ್ಷ ಸಹಾಯಧನ
PVTG scheme25 : ಮನೆ ನಿರ್ಮಾಣಕ್ಕೆ 3.75 ರೂ. ಲಕ್ಷ ಸಹಾಯಧನ

 

ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು:

* ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ಪ್ರತಿ ಮನೆಗೆ ರೂ. 3.75 ಲಕ್ಷದವರೆಗೆ ನೇರ ಆರ್ಥಿಕ ಸಹಾಯಧನವನ್ನು ಕೊಡಲಾಗುತ್ತಿದೆ.
* ಈ ಯೋಜನೆಯು ಮುಖ್ಯವಾಗಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಅರಣ್ಯ ಪ್ರದೇಶಗಳು ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ವಿಸ್ತರಿಸಲ್ಪಟ್ಟಿದೆ.
* ಈ ಯೋಜನೆಯ ಲಾಭವನ್ನು ಪಡೆಯಲು ನೈಜ ದುರ್ಬಲ ಬುಡಕಟ್ಟು ಸಮುದಾಯಗಳಾದ ಕೊರಗ ಮತ್ತು ಜೇನುಕುರುಬ ಜನಾಂಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.

ಇದನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಈ ಯೋಜನೆಗಳ ಸಂಪೂರ್ಣ ಉಸ್ತುವಾರಿಯನ್ನು ವಹಿಸಿಕೊಂಡಿದೆ. ಸ್ಥಳೀಯ ಜಿಲ್ಲಾ ಅಥವಾ ತಾಲೂಕು ಬುಡಕಟ್ಟು ಕಲ್ಯಾಣ ಅಧಿಕಾರಿಗಳ ಕಚೇರಿಗೆ ನೇರವಾಗಿ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದು.ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (PVTG scheme25)

    1. ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
    2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
    3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
    4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
    5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ