(Question paper leak) ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ಉದ್ಯೋಗ ನೇಮಕಾತಿಗಾಗಿ ನಡೆಯುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ವಿವಾದದ ಬೆನ್ನಲ್ಲೇ ಶುಕ್ರವಾರ ದೇಶದಲ್ಲಿ ನೂತನವಾಗಿ ಪೇಪರ್ ಲೀಕ್ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿಯೇ ಪೇಪರ್ ಲೀಕ್ ಕಾಯ್ದೆಯನ್ನು ಅಂಗೀಕರಿಸಲಾಗಿದೆ. ಸರ್ಕಾರ ಈಗ ಅಧಿಸೂಚನೆ ಹೊರಡಿಸಿದ್ದು, ಅದಕ್ಕೆ ಸಾರ್ವಜನಿಕ ಪರೀಕ್ಷಾ ಕಾಯ್ದೆ 2024 ಎಂದು ಹೆಸರಿಸಲಾಗಿದೆ.
ಇದನ್ನೂ ಓದಿ: ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್
ಈ ಕಾಯ್ದೆ ಅನುಷ್ಠಾನದ ನಂತರ, ಸಾರ್ವಜನಿಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ವಿಧಾನ ಬಳಸಿದರೆ 3ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅಕಸ್ಮಾತ್ ಸಂಘಟಿತವಾಗಿ ಇಂತಹ ಅಪರಾಧ ಎಸಗಿದ ಪಕ್ಷದಲ್ಲಿ ಸುಮಾರು 1 ಕೋಟಿ ರೂ.ವರೆಗೆ ದಂಡ ವಿಧಿಸುವ ಅವಕಾಶವನ್ನು ನೀಡಲಾಗಿದೆ.
ಇದನ್ನೂ ಓದಿ: ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್
ಪೇಪರ್ ಸೋರಿಕೆಯಾದರೆ ಕಠಿಣ ಕ್ರಮ:
ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಸಮಯದಲ್ಲಿ ಪರೀಕ್ಷಾ ಸೇವಾ ಪೂರೈಕೆದಾರರು ಪರೀಕ್ಷೆಯ ಸಮಯದಲ್ಲಿ ಅಕ್ರಮಗಳ ಬಗ್ಗೆ ಈಗಾಗಲೇ ಮಾಹಿತಿ ತಿಳಿದೂ ಸಹ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸಂದರ್ಭದಲ್ಲಿ ಪರೀಕ್ಷಾ ಸೇವಾ ಪೂರೈಕೆದಾರರ ಮೇಲೆ 1 ಕೋಟಿ ರೂ.ವರೆಗೆ ದಂಡ ವಿಧಿಸಬಹುದು. ಹಾಗೆಯೇ, ಘಟನೆಯಲ್ಲಿ ಹಿರಿಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ತನಿಖೆ ಸಂಧರ್ಭ ಯಾವುದೇ ಸಾಕ್ಷಿಗಳು ಕಂಡುಬಂದರೆ, ಅವರಿಗೆ 1 ಕೋಟಿ ರೂ.ವರೆಗೆ ದಂಡವನ್ನು ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ಸಹ ವಿಧಿಸಬಹುದು.
ಇದನ್ನೂ ಓದಿ: ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ಸಾರ್ವಜನಿಕ ಪರೀಕ್ಷೆಗಳ ಕಾಯಿದೆ 2024 (Public Examinations (Prevention of Unfair Means) Act 2024) ಅನ್ನು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದ ಮತ್ತು ಅನೇಕ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ ಫೆಬ್ರವರಿ 2024 ರಲ್ಲಿ ಅಂಗೀಕರಿಸಲಾಯಿತು. ಈ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದನ್ನು ಅನುಮೋದಿಸಿದರು. ಈ ಕಾನೂನಿನ ಉದ್ದೇಶವು ಯಾವುದೇ ಅಕ್ರಮಗಳಿಲ್ಲದೇ ಪರೀಕ್ಷೆ ನಡೆಯುತ್ತಿದೆ ಎಂದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಯುವಕರಿಗೆ ಭರವಸೆ ನೀಡುವುದಾಗಿದೆ.
ಇದನ್ನೂ ಓದಿ: ಅಂಚೆ ಇಲಾಖೆಯಿಂದ ಅಪಘಾತ ವಿಮಾ ಯೋಜನೆ; 10 ರಿಂದ 15 ಲಕ್ಷದವರೆಗೆ ಅಪಘಾತ ಇನ್ಸುರೆನ್ಸ್ ಸೌಲಭ್ಯ
ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳು ನಡೆಸುವ ಎಲ್ಲಾ ಪರೀಕ್ಷೆಗಳು ಇದರಲ್ಲಿ ಸೇರಿವೆ. UPSC, SSC, ರೈಲ್ವೇ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳೂ ಈ ಕಾನೂನಿನ ವ್ಯಾಪ್ತಿಯೊಳಗೆ ಬರುತ್ತವೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






