Tuesday, November 28, 2023
Homeರಾಜ್ಯರಾಗಿಣಿ ದ್ವಿವೇದಿ , ಸಂಜನಾ ಗಲ್ರಾನಿ ಡ್ರಗ್ ಸೇವನೆ : FSL ವರದಿಯಲ್ಲಿ ದೃಢ

ರಾಗಿಣಿ ದ್ವಿವೇದಿ , ಸಂಜನಾ ಗಲ್ರಾನಿ ಡ್ರಗ್ ಸೇವನೆ : FSL ವರದಿಯಲ್ಲಿ ದೃಢ

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಈSಐ ಪರೀಕ್ಷೆಯಲ್ಲಿ ದೃಡಪಟ್ಟಿದೆ. ಡ್ರಗ್ ಜಾಲದಲ್ಲಿ ಸಿಲುಕಿ ಸದ್ದು ಮಾಡಿದ್ದ ಚಂದನವನದ ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಖಚಿತ ಎಂದು ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ತಿಳಿದುಬಂದಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್ ನಲ್ಲಿ  ಹೈದರಾಬಾದ್​ನ FSLಗೆ ಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್ ಖನ್ನಾ ಕೂಡ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ.

ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್‌ನಲ್ಲಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಬರೋಬ್ಬರಿ 10 ತಿಂಗಳ ಬಳಿಕ ಎಫ್‌ಎಸ್‌ಎಲ್ ರಿಪೋರ್ಟ್ ಬಂದಿದ್ದು, ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಮಣಿಯರಾದ ರಾಗಿಣಿ,ಸಂಜನಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೀಗಾಗಿ ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎನ್ನುವುದು ಕುತೂಹಲವನ್ನು ಮೂಡಿಸಿದೆ.

ಡ್ರಗ್ಸ್ ಕೇಸ್‌ನಲ್ಲಿ ಬಂಧಿತರಾಗಿದ್ದ ಸಂಜನಾ, ರಾಗಿಣಿ ಒಮ್ಮೆ ಹೇರ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದರು. ಹಾಗಾಗಿ, ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ ಸಿಸಿಬಿ ಅಧಿಕಾರಿಗಳ ಮನವಿಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದ ಕಾರಣ ತಲೆಗೂದಲ ಸ್ಯಾಂಪಲ್ ನನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು.

ಈ ಕುರಿತು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆಯನ್ನು ನೀಡಿದ್ದು, ಸಾಮಾನ್ಯವಾಗಿ ಡ್ರಗ್ಸ್ ಪ್ರಕರಣದಲ್ಲಿ ರಕ್ತ ಮತ್ತು ಮೂತ್ರವನ್ನು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅದರಲ್ಲಿ ಡ್ರಗ್ಸ್ ಸೇವಿಸಿ ಒಂದೆರಡು ದಿನದೊಳಗೆ ಪರೀಕ್ಷೆ ಮಾಡಿದರೆ ಮಾತ್ರ ಪಾಸಿಟಿವ್ ಬರುತ್ತದೆ. ಆದ್ದರಿಂದ ಆರೋಪಿಗಳ ಕೂದಲನ್ನು ಕಳೆದ ವರ್ಷ ಹೈದರಾಬಾದ್ ಅಈSಐಗೆ ಟೆಸ್ಟ್ಗಾಗಿ ಕಳುಹಿಸಲಾಗಿತ್ತು. ಈಗ ಅದರಲ್ಲಿ ಪಾಸಿಟಿವ್ ಬಂದಿದೆ ಎಂದು ಸಂದೀಪ್ ಪಾಟೀಲ್ ಮಾಹಿತಿಯನ್ನು ನೀಡಿದ್ದಾರೆ.

2020 ರ ಸೆಪ್ಟೆಂಬರ್14 ನೇ ತಾರೀಖಿನಂದು ನಟಿ ರಾಗಿಣಿ ದ್ವಿವೇದಿ ಜೈಲು ಸೇರಿದ್ದರು. 140 ದಿನಗಳ ಕಾಲ ಕಸ್ಟಡಿಯಲ್ಲಿದ್ದ ಅವರಿಗೆ, 2021ರ ಜನವರಿ 21 ರಂದು ಸುಪ್ರೀಂ ಕೋರ್ಟ್ ಇವರಿಬ್ಬರಿಗೆ ಜಾಮೀನು ನೀಡಿತ್ತು. ಜನವರಿ 25 ರಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

2020 ರ ಸೆಪ್ಟೆಂಬರ್ 19 ರಂದು ಜೈಲು ಸೇರಿದ್ದ ಸಂಜನಾ ಗಲ್ರಾನಿ ಡಿಸೆಂಬರ್11 2020 ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. 56 ದಿನಗಳ ಕಾಲ ಜೈಲಿನಲ್ಲಿ ಇದ್ದ ಸಂಜನಾ ಗಲ್ರಾನಿ, ಗಂಭೀರ ಅನಾರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Most Popular

Recent Comments