Sunday, June 4, 2023
Homeಕರಾವಳಿರಾಹುಲ್ ಗಾಂಧಿ ಒಬ್ಬ ಡ್ರಗ್ಸ್ ಪೆಡ್ಲರ್, ಅಡಿಕ್ಟ್ : ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ರಾಹುಲ್ ಗಾಂಧಿ ಒಬ್ಬ ಡ್ರಗ್ಸ್ ಪೆಡ್ಲರ್, ಅಡಿಕ್ಟ್ : ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಹುಬ್ಬಳ್ಳಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್ , ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒಬ್ಬ ಡ್ರಗ್ಸ್ ಅಡಿಕ್ಟ್, ಡ್ರಗ್ ಪೆಡ್ಲರ್, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಡುವೆ ಪೈಪೋಟಿ ಇದೆ. ಅವರಿಗೆ ಪಕ್ಷವನ್ನೇ ಮುನ್ನಡೆಸಲು ಆಗುತ್ತಿಲ್ಲ ಇನ್ನೂ ದೇಶವನ್ನು ಮುನ್ನಡೆಸುತ್ತಾರಾ? ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ, ಸಿದ್ದರಾಮಯ್ಯ ನವರು ಸಾಬರ್ ಕಾ ಸಾಥ್, ಸಾಬರ್ ಕಾ ವಿಕಾಸ್ ಎಂದು ಹೇಳುತ್ತಿದ್ದಾರೆ.

ಸೋಲುತ್ತೇವೆ ಎಂಬ ಭೀತಿಯಿಂದ ಕಾಂಗ್ರೆಸ್ ಜನರನ್ನು ಓಲೈಸಿ ರಾಜಕಾರಣ ನಡೆಸಲು ಯತ್ನಿಸುತ್ತಿದೆ, ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಜೋಡೆತ್ತುಗಳಲ್ಲ ಕಾಡೆತ್ತುಗಳು ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿಕೊಂಡಿದ್ದಾರೆ ಎಂದು ಹೇಳಿದರು.

Most Popular

Recent Comments