(Rail connectivity:) ಮಲೆನಾಡು ಮತ್ತು ಕರಾವಳಿ ಭಾಗದ ಜನತೆಯ ಬಹುಕಾಲದ ಕನಸಾಗಿದ್ದ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಯೋಜನೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ‘ಅಮೃತ್ ಭಾರತ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯೋಜನೆಯ ಫೈನಲ್ ಲೊಕೇಶನ್ ಸರ್ವೆ (FLS) ಈಗಾಗಲೇ ಪೂರ್ಣಗೊಂಡಿದ್ದು, ಇಲಾಖೆಯಿಂದ ಅನುಮೋದನೆಯೂ ದೊರೆತಿದೆ ಎಂದು ಮಾಹಿತಿ ನೀಡಿದರು.
ಪ್ರಸ್ತಾವಿತ ಹೊಸ ರೈಲು ಮಾರ್ಗವು ಸುಮಾರು 332 ಕಿಲೋಮೀಟರ್ ಉದ್ದವಿರಲಿದ್ದು, ಇದಕ್ಕೆ ಅಂದಾಜು 3,300 ಕೋಟಿ ರೂಪಾಯಿ ವೆಚ್ಚವಾಗಲಿದೆ. ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣವೇ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.
ಈ ರೈಲು ಮಾರ್ಗ ಜಾರಿಗೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಸಂಪರ್ಕ ಮತ್ತಷ್ಟು ಸುಗಮವಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳ ನಡುವಿನ ವ್ಯಾಪಾರ, ಪ್ರವಾಸೋದ್ಯಮ ಹಾಗೂ ಸಾರಿಗೆ ವ್ಯವಸ್ಥೆಗೆ ಹೊಸ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಹಾಸನ-ಮಂಗಳೂರು ರೈಲು ಹಳಿ ದ್ವಿಗುಣಗೊಳಿಸುವ ಮಹತ್ವದ ಯೋಜನೆಯ ಕುರಿತು ಕೂಡ ಮಾಹಿತಿ ನೀಡಿದ ಸಚಿವರು, 247 ಕಿಲೋಮೀಟರ್ ಉದ್ದದ ಈ ಯೋಜನೆಗೆ ಸುಮಾರು 8,300 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಿದರು.
ಸದ್ಯ ಈ ಯೋಜನೆಯ ಫೈನಲ್ ಲೊಕೇಶನ್ ಸರ್ವೆ ಪರಿಶೀಲನಾ ಹಂತದಲ್ಲಿದ್ದು, ಶೀಘ್ರದಲ್ಲೇ ಮುಂದಿನ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಹೇಳಿದರು. ಈ ಎರಡೂ ಮೆಗಾ ರೈಲ್ವೆ ಯೋಜನೆಗಳು ಕರಾವಳಿ ಕರ್ನಾಟಕದ ಸಾರಿಗೆ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Rail connectivity:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply