Wednesday, April 24, 2024
Homeಮಲೆನಾಡುಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಇದನ್ನೂ ಓದಿ; ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

ಚಿಕ್ಕಮಗಳೂರು: ಅನುದಾನಕ್ಕೆ ಬ್ರೇಕ್, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿರುವ ವರದಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಅನುದಾನಕ್ಕೆ ಬ್ರೇಕ್ ಹಾಕಿರುವ ಕಾರಣದಿಂದಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರು ತಾಲ್ಲೂಕು ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನಾ ಮೆರವಣಿಗೆ ಮಾಡಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

Most Popular

Recent Comments