Raitha Sanjeevini Yojana Rs. 1 lakh insurance in karnataka

(Raitha Sanjeevini Yojana) ಬೆಂಗಳೂರು: ಕೃಷಿ ಚಟುವಟಿಕೆಗಳ ವೇಳೆ ಸಂಭವಿಸುವ ಅಪಘಾತಗಳಿಂದ ಸಂಕಷ್ಟಕ್ಕೆ ಸಿಲುಕುವ ರೈತರು ಹಾಗೂ ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ರೈತ ಸಂಜೀವಿನಿ’ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ.

ಈ ಯೋಜನೆಯಡಿ, ಕೃಷಿ ಕಾರ್ಯಗಳಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಸಾವು ಅಥವಾ ಅಂಗವಿಕಲತೆ ಸಂದರ್ಭಗಳಲ್ಲಿ ಪರಿಹಾರ ನೀಡಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ದುಡಿಯುವವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

ಅರ್ಹತೆ ಮಾನದಂಡಗಳು
ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ವ್ಯಾಪ್ತಿಯಲ್ಲಿ ವಾಸಿಸುವ 15 ರಿಂದ 60 ವರ್ಷ ವಯೋಮಿತಿಯೊಳಗಿನ ರೈತರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಗೆ ಅರ್ಹರಾಗಿದ್ದಾರೆ.

ವಿಮೆ ಅನ್ವಯಿಸುವ ಸಂದರ್ಭಗಳು
ಹೊಲದ ಕೆಲಸಗಳಾದ ಉಳುಮೆ, ಬಿತ್ತನೆ, ಕಳೆ ತೆಗೆಯುವುದು, ಗೊಬ್ಬರ ಹಾಗೂ ಕ್ರಿಮಿನಾಶಕ ಸಿಂಪಡಣೆ, ಬೆಳೆ ಕಟಾವು ಮಾಡುವ ವೇಳೆ ಸಂಭವಿಸುವ ಅಪಘಾತಗಳಿಗೆ ವಿಮೆ ಅನ್ವಯಿಸುತ್ತದೆ.
ಅದೇ ರೀತಿ, ಕೃಷಿ ಉತ್ಪನ್ನಗಳನ್ನು ಎತ್ತಿನ ಗಾಡಿ ಅಥವಾ ಟ್ರ್ಯಾಕ್ಟರ್ ಮೂಲಕ ಮಾರುಕಟ್ಟೆಗೆ ಸಾಗಿಸುವಾಗ ಅಥವಾ ಮರಳುವಾಗ ಆಗುವ ಅಪಘಾತಗಳು ಕೂಡ ಒಳಗೊಂಡಿವೆ.
ಬಣವೆ ಹಾಕುವುದು, ಕಣದಲ್ಲಿ ಒಕ್ಕಣೆ ಮಾಡುವ ಸಂದರ್ಭಗಳು, ಬಾವಿ ಅಥವಾ ಕೊಳವೆ ಬಾವಿ ತೋಡುವ ವೇಳೆ, ಹಾವು ಕಡಿತ, ವನ್ಯಜೀವಿಗಳ ದಾಳಿ, ಜಾನುವಾರುಗಳನ್ನು ಮೇಯಿಸುವಾಗ ಅಥವಾ ಸಾಗಿಸುವಾಗ ಸಂಭವಿಸುವ ಅವಘಡಗಳಿಗೂ ಈ ಯೋಜನೆ ಅನ್ವಯಿಸುತ್ತದೆ.

ಪರಿಹಾರದ ವಿವರ
ಕೃಷಿ ಚಟುವಟಿಕೆ ವೇಳೆ ಮೃತಪಟ್ಟ ರೈತರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಲಾಗುತ್ತದೆ.
ಅಂಗವಿಕಲತೆ ಸಂಭವಿಸಿದಲ್ಲಿ ಅಪಘಾತದ ತೀವ್ರತೆಗೆ ಅನುಗುಣವಾಗಿ ₹10,000 ರಿಂದ ₹50,000 ವರೆಗೆ ನೆರವು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಅಪಘಾತ ಸಂಭವಿಸಿದ 100 ದಿನಗಳೊಳಗಾಗಿ ಸಂಬಂಧಪಟ್ಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳು ಮತ್ತು ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಸಮಿತಿ ಪರಿಶೀಲನೆಯ ಬಳಿಕ ಅರ್ಜಿಯನ್ನು ಮಂಡಳಿಯ ವಿಭಾಗೀಯ ಕಚೇರಿಗೆ ಶಿಫಾರಸು ಮಾಡಲಾಗುತ್ತದೆ. ಅರ್ಜಿ ತಿರಸ್ಕೃತವಾದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.

ಅನರ್ಹತೆಗಳು
ಆತ್ಮಹತ್ಯೆ, ಮದ್ಯಪಾನ ಅಥವಾ ಮಾದಕ ದ್ರವ್ಯ ಸೇವನೆಯಿಂದಾದ ಅಪಘಾತಗಳು, ನೈಸರ್ಗಿಕ ಸಾವು, ಸಿಡಿಲು, ಪ್ರವಾಹದಂತಹ ನೈಸರ್ಗಿಕ ವಿಕೋಪಗಳು ಹಾಗೂ ದಲಭೆ ಅಥವಾ ದಂಗೆಗಳಲ್ಲಿ ಭಾಗಿಯಾದ ಸಂದರ್ಭಗಳಲ್ಲಿ ಸಂಭವಿಸುವ ಸಾವು ಅಥವಾ ಅಂಗವಿಕಲತೆಗೆ ಈ ಯೋಜನೆಯಡಿ ಪರಿಹಾರ ಲಭ್ಯವಿರುವುದಿಲ್ಲ.

ರೈತರಿಗೆ ಅಪಘಾತ ಸಂದರ್ಭಗಳಲ್ಲಿ ತ್ವರಿತ ನೆರವು ನೀಡುವ ಈ ಯೋಜನೆ, ಕೃಷಿ ವಲಯದಲ್ಲಿ ಕೆಲಸ ಮಾಡುವವರ ಭದ್ರತೆಯನ್ನು ಹೆಚ್ಚಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Raitha Sanjeevini Yojana Rs. 1 lakh insurance in karnataka
Raitha Sanjeevini Yojana Rs. 1 lakh insurance in karnataka

ಇತ್ತೀಚಿನ ಜನಪ್ರಿಯ ಸುದ್ದಿಗಳು (Raitha Sanjeevini Yojana)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ