Ration -card;ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್

(Ration -card;) ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಆದರೆ, ಅನರ್ಹ ರೇಷನ್ ಕಾರ್ಡ್ ಅನ್ನು ರದ್ದುಪಡಿಸುವ ಕಾರ್ಯಕ್ಕೆ ವೇಗ ನೀಡಿರುವ ಆಹಾರ ಇಲಾಖೆ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕುಟುಂಬ ತಂತ್ರಾಂಶದ ಮೊರೆ ಹೋಗಿದ್ದು ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್ ಕಾರ್ಡ್ಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಿದೆ.


ಇದನ್ನೂ ಓದಿ; ಜಿಯೋ, ಏ‌ರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು


ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ ಇ- ಆಡಳಿತ ಕೇಂದ್ರಕ್ಕೆ ಮನವಿ ಮಾಡಿದ್ದು, ಈ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿವೆ. 10,54,368 ಕಾರ್ಡುಗಳನ್ನು 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ.


ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ


1,06,152 ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದಾರೆ. 4272 ಪಡಿತರ ಚೀಟಿಗಳು ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ. ಹತ್ತು ದಿನಗಳ ಒಳಗೆ ಅನರ್ಹ ಪಡಿತರ ಚೀಟಿಗಳನ್ನು ಮುಕ್ತಾಯಗೊಳಿಸಬೇಕು ಎಂದು ಎಲ್ಲಾ ಜಂಟಿ ಮತ್ತು ಉಪ ನಿರ್ದೇಶಕರಿಗೆ ಆಹಾರ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ


ವಾರ್ಷಿಕ 1.20 ಲಕ್ಷ ಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರ, ಮನೆಯಲ್ಲಿ ಕಾರು ಹೊಂದಿರುವ, ಆದಾಯ ತೆರಿಗೆ ಪಾವತಿಸುವವರು, ಏಳೂವರೆ ಎಕರೆ ಒಣ ಅಥವಾ ನೀರಾವರಿ ಭೂಮಿ ಹೊಂದಿರುವವರು, ಅನುದಾನಿತ- ಅನುದಾನರಹಿತ ಕಾಲೇಜು ನೌಕರರು, ನೊಂದಾಯಿತ ಗುತ್ತಿಗೆದಾರರು, ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ಸ್ವಂತಕ್ಕಾಗಿ ಒಂದು ಆಟೋ ರೀಕ್ಷಾ ಹೊರತುಪಡಿಸಿ 100 ಸಿಸಿ ಮೇಲಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಹೊಂದಿರುವುದು ಸೇರಿ 14 ಮಾನದಂಡ ಮುಂದಿಟ್ಟುಕೊಂಡು ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಗೆ ಇಲಾಖೆ ಮುಂದಾಗಿದೆ.

Ration -card;ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್
Ration -card;ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್

ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಉಚಿತ ಈ ತರಬೇತಿಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!