Ration Card Correction: ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ಆಧಾರ್ ಕಾರ್ಡ್ ನ ಹಾಗೇ ರೇಷನ್ ಕಾರ್ಡ್ ಪ್ರಮುಖವಾಗಿ ಬೇಕಾಗುತ್ತದೆ, ಈಗ ಸರ್ಕಾರದಿಂದ ಪಡಿತರ ಚೀಟಿ ತಿದ್ದುಪಡಿ ಹಾಗೂ ಹೊಸ ಸೇರ್ಪಡೆ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕುವ ಬಗ್ಗೆ ಮಹತ್ವದ ಮಾಹಿತಿ ಬಂದಿದ್ದು ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಕೊನೆಯವರೆಗೂ ಓದಿ.
ಇದನ್ನೂ ಓದಿ; ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
ರೇಷನ್ ಕಾರ್ಡ್ನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಮತ್ತು ರೇಷನ್ ಕಾರ್ಡ್ ಗೆ ಹೊಸ ಸದಸ್ಯರ ಸೇರ್ಪಡೆಗೆ ಆಹಾರ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿರುತ್ತದೆ ಈ ಕುರಿತು ಮಹತ್ವದ ಆದೇಶವನ್ನು ಆಹಾರ ಇಲಾಖೆ ಹೊರಡಿಸಿದೆ, ಆದರೆ ಹೊಸ ರೇಷನ್ ಕಾರ್ಡ್ ಅನ್ನು ಮುಂದಿನ ಆದೇಶದ ವರೆಗೆ ಮಂಜೂರು ಮಾಡದಂತೆ ಆಹಾರ ನಾಗರಿಕ ಸರಬರಾಜು ಇಲಾಖೆಯ ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ವಿಭಾಗದಿಂದ ನಿರ್ದೇಶನ ನೀಡಲಾಗಿದೆ.
ಪ್ರಸ್ತುತ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಮತ್ತು ಯಾವುದೇ ಹೊಸ ರೇಷನ್ ಕಾರ್ಡ್ ಅನ್ನು ಮಂಜೂರು ಮಾಡದಂತೆ ಆಹಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿರವರು ಆದೇಶ ಹೊರಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ, ವಿಭಾಗರವರ ಆದೇಶದಲ್ಲಿ ಉಲ್ಲೇಖಿಸಿದ್ಡಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
ತಿದ್ದುಪಡಿಗೆ 4 ದಿನ ಮಾತ್ರ ಅವಕಾಶ:
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ನಾಲ್ಕು ದಿನ ಮಾತ್ರ ಅವಕಾಶ ಮಾಡಿಕೊಡಲಾಗಿದೆ. (18 ಆಗಸ್ಟ್ 2023 ರಿಂದ 21 ಆಗಸ್ಟ್ 2023 ಮಿಂಚಿತವಾಗಿ ಅರ್ಜಿ ಸಲ್ಲಿಸಬೇಕು. 12 ಗಂಟೆಯಿಂದ 4 ಗಂಟೆಯವರೆಗೆ
ಎಲ್ಲಿ ಅರ್ಜಿ ಸಲ್ಲಿಸಬೇಕು:
ಗ್ರಾಮ ಒನ್, CSC ಕೇಂದ್ರ, ಕರ್ನಾಟಕ ಒನ್ ಗಳಿಗೆ ಭೇಟಿ ಮಾಡಿ ಅರ್ಜಿ ಸಲ್ಲಿಸಿ ಸಲ್ಲಿಸಬಹುದು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತು ಇತರೆ ಕಾರಣಗಳಿಂದ ಕುಟುಂಬದ ಯಜಮಾನಿಯ ಹೆಸರಿನ ತಿದ್ದುಪಡಿ ಮಾಡಿಕೊಳ್ಳಲು ಸಹ ಅವಕಾಶವಿದ್ದು ಈ ಮೇಲೆ ತಿಳಿಸಿರುವ ಕೇಂದ್ರಗಳಿಗೆ ತೆರಳಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದು.
Ration Card Correction: ದಾಖಲೆಗಳು ಯಾವುದೆಲ್ಲಾ ಬೇಕು:
* ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ
ಇದನ್ನೂ ಓದಿ; ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ?:
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು
ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
* https://ahara.kar.nic.in/home ಲಾಗಿನ್ ಆಗಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್ ನಲ್ಲಿ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿ
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.






Leave a Reply