(Ration card hl:) ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಸದನದಲ್ಲಿ ತಿಳಿಸಿದರು. ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.
ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!
ಪ್ರಕರಣ ದಾಖಲು:
ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
238 ಆರೋಪಿಗಳ ಬಂಧನ:
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.
ದಂಡ ವಸೂಲಿ:
ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ನಿರಂತರವಾಗಿ ನಡೆಯಲಿದೆ ಪಡಿತರ ತಿದ್ದುಪಡಿ ಕಾರ್ಯ:
ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






