(Ration-card Holders) ಪಡಿತರ ಚೀಟಿ ಹೊಂದಿರುವವರಿಗೆ ಮೇ ತಿಂಗಳ ಪಡಿತರ ಧಾನ್ಯಗಳನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ ಗೆ 35 ಕೆ.ಜಿ. ಅಕ್ಕಿಯನ್ನು ವಿತರಿಸಲಾಗಿದ್ದು, ಆದ್ಯತಾ ಹಾಗೂ BPL ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗಿದೆ.
ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
APL ಏಕಸದಸ್ಯ ಪಡಿತರ ಚೀಟಿದಾರರಿಗೆ, ಪ್ರತಿ ಕೆ.ಜಿ. ಅಕ್ಕಿಯನ್ನು 15 ರೂ. ದರದಲ್ಲಿ ಒಪ್ಪಿಗೆ ನೀಡಿದ್ದು, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ. ಎರಡು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿರುವ APL ಪಡಿತರ ಚೀಟಿದಾರರಿಗೆ, 10 ಕೆ.ಜಿ. ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
ಸರ್ಕಾರದ ಗ್ಯಾರಂಟಿ ಯೋಜನೆಯಡಿ, 5 ಕೆ.ಜಿ. ಅಕ್ಕಿ ಬದಲಿಗೆ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಪಡೆಯಲು ಹಲವು ದಿನಗಳಿಂದ ಕಾಯ್ತಾ ಇರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳಿನಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಪ್ರಮುಖವಾಗಿದೆ. ಹಾಗಾದರೆ ಯಾವ ದಾಖಲೆ, ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?:
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply