(Ration-Card) ಪಡಿತರ ಚೀಟಿ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಕಡ್ಡಾಯ. ಅಲ್ಲದೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
(ಗ್ರಾಮಾಂತರ ಪ್ರದೇಶ)
* ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
* ಈಗ ವಾಸ ಮಾಡುತ್ತಿರುವ ಮನೆ ವಿಳಾಸ
* ಮನೆಯ ಆಸ್ತಿ ಸಂಖ್ಯೆ ವಿವರ
* ಮನೆಯ ವಿದ್ಯುತ್ ಸಂಪರ್ಕದ ಬಿಲ್ ಪ್ರತಿ
* ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
* ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
* ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
(ನಗರ / ಪಟ್ಟಣ ಪ್ರದೇಶ)
* ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
* ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ.
* ನಿಮ್ಮ ಮನೆಯ ವಿದ್ಯುತ್ ಬಿಲ್
* ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
* ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
* ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
* ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
* ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.
* ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಅರ್ಜಿ ಸಲ್ಲಿಸುವುದು ಹೇಗೆ?:
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ. (https://ahara.kar.nic.in/)
* ಇ-ಸರ್ವಿಸ್ (ಇ-ಸೇವೆ) ಮೇಲೆ ಕ್ಲಿಕ್ ಮಾಡಿ.
* ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ.
* ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ.
* ಅಲ್ಲಿ APL ಹಾಗೂ BPL ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.
ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Aharadept/Doc/newaplrc.pdf

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply