Ration- Cards:ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಮಹತ್ವದ ಮಾಹಿತಿ

(Ration- Cards:) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್‌ ಕಾರ್ಡ್‌ ಮುಖ್ಯವಾಗಿದೆ. ಅಲ್ಲದೆ ಪಡಿತರ ಪಡೆಯಲು ರೇಷನ್‌ ಕಾರ್ಡ್‌ ಬೇಕು. ಹಾಗೆಯೇ ರೇಷನ್‌ ಕಾರ್ಡ್‌ ಹೊಂದಿರುವವರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಪಡಿತರ ಸಿಗುವುದು ಕಷ್ಟವಾಗಿದೆ.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ಹೌದು, ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.


ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ


ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!


ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್‌ ಬುಕ್‌ ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್‌ ಪೋರ್ಟ್ ಅಳತೆಯ ಪೋಟೋ

Ration- Cards:ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಮಹತ್ವದ ಮಾಹಿತಿ
Ration- Cards:ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಮಹತ್ವದ ಮಾಹಿತಿ

ಇದನ್ನೂ ಓದಿ; ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್; ಏನದು? ಮಹಿಳೆಯರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು