Thursday, June 8, 2023
Homeರಾಜಕೀಯ' ನೋ ವ್ಯಾಕ್ಸಿನೇಷನ್, ನೋ ರೇಷನ್ ' ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಸರಿಯಿಲ್ಲ - ಸಿಎಂ...

‘ ನೋ ವ್ಯಾಕ್ಸಿನೇಷನ್, ನೋ ರೇಷನ್ ‘ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಸರಿಯಿಲ್ಲ – ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಲಸಿಕೆಯನ್ನು ಪಡೆಯದ ಜನರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದಂತಹ ಚಾಮರಾಜನಗರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಕೊವಿಡ್ ಲಸಿಕೆಯನ್ನು ಪಡೆಯದಿದ್ದರೆ ಪಡಿತರವನ್ನು ನೀಡುವುದಿಲ್ಲ ಅನ್ನೋದು ತಪ್ಪು, ಜನರ ಮನವೊಲಿಸಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮಾಡಬೇಕೆಂದು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ನೀಡುತ್ತಿರುವ ಕೊರೊನಾ ಲಸಿಕೆಯ ವೇಗವನ್ನು ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನವನ್ನು ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದರೆ ಮಾತ್ರ ಪಡಿತರ ವಿತರಣೆಯನ್ನು ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದರು ಎಂದು ಹೇಳಲಾಗುತ್ತಿದೆ ಜಿಲ್ಲಾಧಿಕಾರಿ ಹೊರಡಿಸಿರುವಂತಹ ಈ ಆದೇಶ ಹಲವು ಟೀಕೆಗಳಿಗೆ ಎಡೆಮಾಡಿಕೊಟ್ಟಿದೆ.

ಈ ಆದೇಶದ ಕುರಿತು ಪ್ರತಿಕ್ರಿಯೆಯನ್ನು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರವು ಹೇಳುತ್ತೆ ಕೋವಿಡ್ ಲಸಿಕೆಯನ್ನು ಪಡೆಯದಿದ್ದರೆ ಪಡಿತರ, ಪಿಂಚಣಿ ಎರಡನ್ನು ನೀಡಲ್ಲ ಅಂತ. ಆದರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಎಂದು ಜನರಿಗೆ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕವಾಗಿರುವoತಹ ಕ್ರಮವಾಗಿದೆ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

Most Popular

Recent Comments