(recruitment 25:) ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..
ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?
28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ಧವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ /ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (recruitment 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





