PFI ಬ್ಯಾನ್ ಗೆ ಪ್ರತೀಕಾರ; ವಿಧ್ವಂಸಕ ಕೃತ್ಯಕ್ಕೆ ಮಲೆನಾಡಿನಲ್ಲೇ ನಡೆದಿತ್ತು ಸಂಚು

ಬೆಂಗಳೂರು/ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ತನಿಖಾ ದಳದಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇದು ಶಿವಮೊಗ್ಗ ಮತ್ತು ದಕ್ಷಿಣ ಕನ್ನಡದಲ್ಲೇ ಪ್ರಮುಖವಾಗಿ ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಚ್ ಡಿ ತಮ್ಮಯ್ಯ ಫುಲ್ ರೌಂಡ್ಸ್

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು, ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿದ್ದು, ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ ತನಿಖೆಯ ವೇಳೆ ಪತ್ತೆಯಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಎನ್‌ಐಎ ದಾಳಿ ವೇಳೆ ವ್ಯಕ್ತಿಗಳ ಖಾತೆಗಳಿಗೆ ವಿದೇಶದಿಂದ ಹಣ ಜಮೆ ಆಗಿದ್ದಕ್ಕೆ ಮಹತ್ವದ ಸಾಕ್ಷ್ಯಗಳು ಕೂಡ ಲಭ್ಯವಾಗಿದೆ.

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ