(Retired Teachers:) ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ 2024-25 ಮತ್ತು 2025-26ನೇ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಾಕಿ ಉಳಿದಿದ್ದ ‘ಗಳಿಕೆ ರಜೆ ನಗದೀಕರಣ’ (Earned Leave Encashment) ಸೌಲಭ್ಯಕ್ಕಾಗಿ ರಾಜ್ಯ ಸರ್ಕಾರವು ಭಾರೀ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಿದ ಆದೇಶದಂತೆ ವಿಜಯಪುರ, ಕೊಡಗು ಮತ್ತು ಮಂಗಳೂರು ಜಿಲ್ಲೆಗಳ ವ್ಯಾಪ್ತಿಯ ತಾಲ್ಲೂಕುಗಳಿಗೆ ಒಟ್ಟು ₹752.71 ಲಕ್ಷ ಅನುದಾನವನ್ನು ಹಂಚಿಕೆ ಮಾಡಲಾಗಿದೆ. 2024-25ನೇ ಸಾಲಿನಲ್ಲಿ ನಿವೃತ್ತರಾದವರಿಗೆ ಪಾವತಿ ಮಾಡಲು ಆದ್ಯತೆ ನೀಡಲಾಗುತ್ತದೆ. ಬಳಿಕ 2025-26ನೇ ಸಾಲಿನಲ್ಲಿ (ಏಪ್ರಿಲ್ 2024ರಿಂದ ಜನವರಿ 2026ರವರೆಗೆ) ನಿವೃತ್ತರಾದವರ ಹಿರಿತನದ ಪಟ್ಟಿಯನ್ನು ಸಿದ್ಧಪಡಿಸಿ ಕ್ರಮವಾಗಿ ಹಣ ಬಿಡುಗಡೆ ಮಾಡಲಾಗುತ್ತದೆ.
ಬಿಡುಗಡೆಯಾದ ಅನುದಾನವು ವ್ಯಪಗತವಾಗದಂತೆ (Lapse ಆಗದಂತೆ) ಮಾರ್ಚ್ 9, 2026ರೊಳಗೆ ಹಣವನ್ನು ವೆಚ್ಚ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.
ಗಳಿಕೆ ರಜೆ ಲೆಕ್ಕಾಚಾರದಲ್ಲಿ ಕಂಡುಬಂದಿದ್ದ ಲೋಪದೋಷಗಳನ್ನು ಸರಿಪಡಿಸಿ, KCSR ನಿಯಮ 113(5)ರ ಪ್ರಕಾರ ಗರಿಷ್ಠ 300 ದಿನಗಳ ಮಿತಿಗೆ ಒಳಪಟ್ಟು ನಗದೀಕರಣ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಈ ಹಿಂದೆ ಕೆಲ ಜಿಲ್ಲೆಗಳು ಮಾಹಿತಿ ನೀಡಲು ವಿಳಂಬ ಮಾಡಿದ್ದರಿಂದ ಹಾಗೂ ಅಪೂರ್ಣ ಮಾಹಿತಿ ಸಲ್ಲಿಸಿದ್ದರಿಂದ ಅನುದಾನ ಬಿಡುಗಡೆ ವಿಳಂಬವಾಗಿತ್ತು. ಈಗ ಎಲ್ಲಾ ಪ್ರಸ್ತಾವನೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅನುದಾನ ಬಿಡುಗಡೆ ಮಾಡುವ ಮೂಲಕ ನಿವೃತ್ತ ನೌಕರರ ಬಹುಕಾಲದ ನಿರೀಕ್ಷೆಗೆ ತೆರೆ ಎಳೆಯಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Retired Teachers:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





