RICE KR: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!

(RICE KR) ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ, ಸರ್ಕಾರದ ಅಧೀನದ ನಿಗಮಗಳಿಗೆ ಮತ್ತು ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳಿಗೆ ಪ್ರತಿ ಕೆಜಿಗೆ 22 ರೂ.50 ಪೈಸೆಯಂತೆ ಅಕ್ಕಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದೆ.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ


ಹೌದು, ಕಡಿಮೆ ದರಕ್ಕೆ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಆಹಾರ ಮತ್ತು ಸಾರ್ವಜಕನಿಕ ವಿತರಣಾ ಇಲಾಖೆ ಮುಂದಾಗಿದೆ.

ಈ ಹಿಂದೆ ಅಕ್ಕಿ ನೀಡಲು ಒಪ್ಪದ ಕೇಂದ್ರ:
ಹಿಂದೆ ಪ್ರತಿ ಕೆಜಿಗೆ 28 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಆದರೆ, 2024ರ ಜೂನ್‌ನಿಂದ 2024ರ ಡಿಸೆಂಬರ್ ವರೆಗೆ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಪರಿಣಾಮ ಗಣನೀಯವಾಗಿ ಅಕ್ಕಿ ಹಾಗೂ ಗೋಧಿ ಉತ್ಪಾದನೆ ಹೆಚ್ಚಳ ಹಾಗೂ ದೇಶಾದ್ಯಂತ 556 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇರುವ ಕಾರಣ ಪ್ರತಿ ಕೆಜಿಗೆ 5 ರೂ.50 ಪೈಸೆ ಇಳಿಸಿ ಹೊಸ ದರದಲ್ಲಿ ಖರೀದಿಸುವ ಅವಕಾಶ ನೀಡಿದೆ.


ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್‌!, ಯಾಕೆ ಗೊತ್ತಾ?; ರೇಷನ್‌ ಕಾರ್ಡ್‌ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ (ಒಎಂಎಸ್‌ಎಸ್), ಇ-ಹರಾಜು ಮೂಲಕ ವ್ಯಾಪಾರಿಗಳು, ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳು ಸೇರಿ ಖಾಸಗಿಯವರು 1 ಟನ್‌ನಿಂದ 5 ಸಾವಿರ ಟನ್‌ರೆಗೆ ಖರೀದಿಸಬಹುದು.

2023ರಲ್ಲಿ ಮಳೆ ಕೊರತೆಯಿಂದಾಗಿ ಆಹಾರ ಉತ್ಪಾದನೆ ಕುಸಿತವಾಗಿತ್ತು. ಹೀಗಾಗಿ, ನಿಗದಿಗಿಂತ ಹೆಚ್ಚು ಪಡಿತರ ದಾಸ್ತಾನು ಇರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ತೊಂದರೆಯಾಗಬಹುದೆಂಬ ಕಾರಣಕ್ಕಾಗಿ ಕೇಂದ್ರ, ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಹಿಂಪಡೆದಿತ್ತು. ಆದರೆ,ಈ ಬಾರಿ ದಾಸ್ತಾನು ಇರುವ ಕಾರಣ 2024ರ ಅಕ್ಟೋಬರ್‌ನಿಂದ ಒಎಂಎಸ್ಎಸ್ ಯೋಜನೆ ಮರು ಜಾರಿಗೆ ಬಂದಿದೆ.


ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!


ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನಗದು ವರ್ಗಾವಣೆ ವ್ಯವಸ್ಥೆಯನ್ನು ರಾಜ್ಯ ಸರ್ಕಾರ 2023ರ ಜು.10ರಿಂದ ಜಾರಿಗೆ ತಂದಿದೆ. ಯೋಜನೆಯಡಿ ಬಿಪಿಎಲ್ ಕಾರ್ಡ್‌ ಪ್ರತಿ ಸದಸ್ಯನಿಗೆ ಕೆಜಿಗೆ 34 ರೂ.ನಂತೆ 5 ಕೆಜಿ ಅಕ್ಕಿಗೆ 170 ರೂ.ನಗದನ್ನು ಖಾತೆಗೆ ಹಾಕುತ್ತಿದೆ. ಅಂತ್ಯೋದಯ ಕಾರ್ಡ್‌ಲ್ಲಿರುವ ನಾಲ್ಕು ಸದಸ್ಯರಿದ್ದರೆ ಕುಟುಂಬಕ್ಕೆ 170 ರೂ., ಐದು ಸದಸ್ಯರಿದ್ದರೆ 510 ರೂ., ಆರು ಸದಸ್ಯರಿದ್ದರೆ 850 ರೂ. ಹಾಕಲಾಗುತ್ತಿದ್ದು, ಪ್ರತಿ ತಿಂಗಳು ಒಂದು ಕೋಟಿ ಕಾರ್ಡ್‌ಳಿಗೆ 450-500 ಕೋಟಿ ರೂ.ಜಮ ಮಾಡಲಾಗುತ್ತಿದೆ. ಇದೀಗ ಕೇಂದ್ರದಿಂದ ಅಕ್ಕಿ ಖರೀದಿಸಿ ಕೊಟ್ಟರೆ ವರ್ಷಕ್ಕೆ ನೂರಾರು ಕೋಟಿ ರೂ.ಉಳಿತಾಯವಾಗಲಿದೆ.

RICE KR: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!
RICE KR: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ