(Rice price hike:) ಬೆಂಗಳೂರು, ನ.4: ರಾಜ್ಯದಲ್ಲಿ ಕಳೆದ ಎರಡು-ಮೂರು ತಿಂಗಳಿಂದ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಹಲವು ಪ್ರಮುಖ ಅಕ್ಕಿ ತಳಿಗಳ ಬೆಲೆ ಕೆ.ಜಿ.ಗೆ ₹100ರ ಗಡಿ ದಾಟಿದೆ. ಈಗಾಗಲೇ ಶೇ.25ರಿಂದ 30ರಷ್ಟು ಬೆಲೆ ಏರಿಕೆಯಾಗಿರುವುದರಿಂದ ಸಾಮಾನ್ಯ ಜನರು ಹಾಗೂ ಹೋಟೆಲ್ ಉದ್ಯಮ ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಮುಂಗಾರು ಮಳೆಯ ಕೊರತೆಯಿಂದ ಭತ್ತದ ನಾಟಿ ಪ್ರಮಾಣ ಹಾಗೂ ಇಳುವರಿ ಗಣನೀಯವಾಗಿ ಕುಸಿದಿರುವುದು ಅಕ್ಕಿ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ. ವಿಶೇಷವಾಗಿ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಂತಹ ಪ್ರಮುಖ ಭತ್ತ ಬೆಳೆಯುವ ಪ್ರದೇಶಗಳಲ್ಲಿ ನಾಟಿ ಪ್ರಮಾಣ ಇಳಿಕೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ಪೂರೈಕೆಯ ಮೇಲೆ ಪರಿಣಾಮ ಬೀರಿದೆ.
ಸೋನಾ ಮಸೂರಿ, ಸ್ಟೀಮ್ ರೈಸ್, ಕೊಲಂ ರೈಸ್, ಬಾಸ್ಮತಿ, ಜೀರಾ ರೈಸ್ ಹಾಗೂ ರಾಜ್ಮುಡಿ ಸೇರಿದಂತೆ ಜನಪ್ರಿಯ ಅಕ್ಕಿ ತಳಿಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಈಗಾಗಲೇ ಅಡುಗೆ ವೆಚ್ಚ ಹೆಚ್ಚಳದಿಂದ ಕಂಗಾಲಾಗಿರುವ ಹೋಟೆಲ್ ಉದ್ಯಮಕ್ಕೂ ಅಕ್ಕಿ ಬೆಲೆ ಏರಿಕೆ ಬಿಸಿ ತಟ್ಟಿದೆ. ಆಹಾರ ಪದಾರ್ಥಗಳ ಬೆಲೆ ಹೆಚ್ಚಿಸುವ ಅನಿವಾರ್ಯತೆ ಎದುರಾಗುವ ಆತಂಕವೂ ಉದ್ಯಮಿಗಳಲ್ಲಿ ಮೂಡಿದೆ.
ಇನ್ನೊಂದೆಡೆ, ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅಕ್ರಮ ಸಂಗ್ರಹಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಸುಮಾರು 18 ಲಕ್ಷ ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಕ್ರಮ ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿದಂತೆ 232ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಅಕ್ಕಿ ಬೆಲೆ ಏರಿಕೆಯಿಂದ ಜನಸಾಮಾನ್ಯರ ಕುಟುಂಬದ ಮಾಸಿಕ ಖರ್ಚಿನ ಮೇಲೂ ಹೆಚ್ಚುವರಿ ಹೊರೆ ಬೀಳುತ್ತಿದ್ದು, ಬೆಲೆ ನಿಯಂತ್ರಣಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಜನಪ್ರಿಯ ಸುದ್ದಿಗಳು (Rice price hike:)
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ






Leave a Reply