Rice Prices Hike: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

(Rice Prices Hike: ) ಬೆಂಗಳೂರು, ಮೇ 14: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ಅಕ್ಕಿ ಬೆಲೆಯೂ ಗಗನಕ್ಕೇರುವ ಸೂಚನೆಗಳು ಕಾಣಿಸುತ್ತಿವೆ. ಕಳೆದ ವಾರ ಅಡುಗೆ ಎಣ್ಣೆ ದರ ಏರಿಕೆಯಾಗಿದ್ದ ಬೆನ್ನಲ್ಲೇ ಈಗ ಅಕ್ಕಿ ದರ ಹೆಚ್ಚಳದ ಆತಂಕ ಮನೆ ಮಾಡಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ವಿದೇಶಗಳಿಗೆ ಹೆಚ್ಚುತ್ತಿರುವ ರಫ್ತು ಕಾರಣದಿಂದ ನಗರದ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ದರ ಪ್ರತಿ ಕಿಲೋಗೆ 4ರಿಂದ 5 ರೂಪಾಯಿವರೆಗೆ ಏರಿಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ 8ರಿಂದ 10 ರೂಪಾಯಿವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಒಂದು ಅಕ್ಕಿ ಚೀಲದ ಬೆಲೆ ಹೋಲ್‌ಸೇಲ್ ಮಾರುಕಟ್ಟೆಯಲ್ಲಿ 55ರಿಂದ 60 ರೂಪಾಯಿವರೆಗೆ ಏರಿಕೆಯಾಗುತ್ತಿದ್ದರೆ, ರಿಟೇಲ್ ಮಾರುಕಟ್ಟೆಯಲ್ಲಿ 60ರಿಂದ 80 ರೂಪಾಯಿವರೆಗೆ ಹೆಚ್ಚುವರಿ ಹೊರೆ ಬೀಳಲಿದೆ ಎನ್ನಲಾಗಿದೆ.

ವ್ಯಾಪಾರಿಗಳ ಪ್ರಕಾರ, ಈ ತಿಂಗಳ ಅಂತ್ಯದ ವೇಳೆಗೆ ಅಕ್ಕಿ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸಗಟು ದರದಲ್ಲಿ ಮತ್ತೆ 4ರಿಂದ 5 ರೂಪಾಯಿ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ.

ಅಕ್ಕಿ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿ ಕೃಷಿ ಉತ್ಪನ್ನಗಳ ಕಚ್ಚಾ ವಸ್ತುಗಳ ಕೊರತೆಯನ್ನು ಉಲ್ಲೇಖಿಸಲಾಗುತ್ತಿದೆ. ಜೊತೆಗೆ ಭಾರತದಿಂದ ಶ್ರೀಲಂಕಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ರಫ್ತು ಆಗುತ್ತಿದ್ದು, ಅಲ್ಲಿಂದ ಇತರೆ ದೇಶಗಳಿಗೂ ಸರಬರಾಜು ನಡೆಯುತ್ತಿದೆ. ಇದರ ಪರಿಣಾಮವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿ ದಾಸ್ತಾನು ಕಡಿಮೆಯಾಗುತ್ತಿದ್ದು, ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ ಅಡುಗೆ ಎಣ್ಣೆ ದರವೂ ಈಗಾಗಲೇ ಏರಿಕೆಯಾಗಿದ್ದು, ಸಗಟು ಮಾರುಕಟ್ಟೆಯಲ್ಲಿ ಲೀಟರ್‌ಗೆ 3 ರೂಪಾಯಿ ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ 5ರಿಂದ 10 ರೂಪಾಯಿವರೆಗೆ ಹೆಚ್ಚಳವಾಗಿದೆ. ಇಂಧನ, ಆಟೋ ಎಲ್‌ಪಿಜಿ, ಕಮರ್ಷಿಯಲ್ ಸಿಲಿಂಡರ್ ಸೇರಿದಂತೆ ಬಹುತೇಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಮಾಸಿಕ ಬಜೆಟ್ ಅಸ್ತವ್ಯಸ್ತವಾಗುತ್ತಿದೆ.

Rice Prices Hike: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!
Rice Prices Hike: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Rice Prices Hike: )

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?